Document

Lokasabha 2024:  ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು. ದಳಪತಿಗಳ ಪ್ಲಾನ್ ‘B’ ಏನು.?

Lokasabha 2024:  ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು. ದಳಪತಿಗಳ ಪ್ಲಾನ್ ‘B’ ಏನು.?

Janataa24 NEWS DESK

jds plan b in lokasabha 2024 bjp shock karnataka jds kannada news hdk modi3164802334790245205

ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆಯ ವಿಚಾರದಲ್ಲಿ ಹಲವಾರು ಗೊಂದಲ ಉಂಟಾಗಿದೆ. ಪ್ರಮುಖವಾಗಿ ಕೋಲಾರ ಟಿಕೆಟ್ ನೀಡುವ ವಿಚಾರದಲ್ಲಿ ಜೆಡಿಎಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಲೋಕಸಭಾ ಎಲೆಕ್ಷನ್ ಆರಂಭದಲ್ಲೇ ಮೈತ್ರಿಯಲ್ಲಿ ಬಿರುಕು ಉಂಟಾಗಿದೆ ಅನ್ನೋ ವಿಚಾರ ಚರ್ಚೆಯಾಗುತ್ತಿದೆ.

janataa 24 hdk


ರಾಜ್ಯದಲ್ಲಿ ಮೈತ್ರಿ ಮುರಿದು ಬಿದ್ದರೆ ಜೆಡಿಎಸ್‌ ನಾಯಕರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ನೀಡುವ ಸಾಧ್ಯತೆ ಇದೆ. ಮೈತ್ರಿ ಮುರಿದು ಬಿದ್ರೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ನಿಂದ ಪ್ಲಾನ್ ‘ಬಿ’ ಕೂಡ ರೆಡಿಯಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗಾಗಿ ಜೆಡಿಎಸ್‌ ತನ್ನ ಕ್ಷೇತ್ರಗಳನ್ನು ತ್ಯಾಗ ಮಾಡಿದೆ. ಒಂದು ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ  ಮುರಿದು ಬಿದ್ದರೆ ಬಿಜೆಪಿ ವಿರುದ್ಧ JDS ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಪ್ರಮುಖವಾಗಿ ಕೋಲಾರದ ಟಿಕೆಟ್ ಸಿಗದಿದ್ರೆ ಜೆಡಿಎಸ್ ಅಭ್ಯರ್ಥಿಯನ್ನ ನಿಲ್ಲಿಸಲು ಚಿಂತನೆ ನಡೆಸಲಾಗಿದೆ.

 

images 5

ದಳಪತಿಗಳ ಲೆಕ್ಕಾಚಾರದ ಪ್ರಕಾರ ಜೆಡಿಎಸ್ ಬೆಂಬಲ ಇಲ್ಲದೆ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲೋದು ಕಷ್ಟ. ಹೀಗಾಗಿ ಮೈತ್ರಿ ಮುರಿದು ಬಿದ್ದರೆ ಮೈಸೂರು, ಚಾಮರಾಜನಗರ, ತುಮಕೂರಲ್ಲಿ JDS ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ.
ತುಮಕೂರಿನಲ್ಲಿ ಜೆಡಿಎಸ್ ಬೆಂಬಲವಿಲ್ಲದೆ ಬಿಜೆಪಿ ಗೆಲ್ಲೋದು ಕಷ್ಟ. ಮೈಸೂರು ಭಾಗದಲ್ಲಿ ಜೆಡಿಎಸ್ ಇಲ್ಲದೆ, ಬಿಜೆಪಿ ಗೆಲುವು ಸುಲಭವಲ್ಲ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಗೆಲುವು ಕಷ್ಟವಾಗಲಿದೆ. ಶಿವಮೊಗ್ಗ, ಕಲಬುರಗಿ, ರಾಯಚೂರಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಪ್ರಬಲವಾಗಿದೆ. ಈ ಹಿನ್ನೆಲೆಯಲ್ಲಿ ಮೈತ್ರಿ ಮುರಿದು ಬಿದ್ದರೆ  ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿಗೆ ಸೆಡ್ಡು ಹೊಡೆಯುವ ಸಾಧ್ಯತೆ ಇದೆ.

 

https://www.janataa24.com/hdk-munisu-apaswara-kumaraswamy-in-jds-allianc-

 

ಕೆಳಗಿನ #ಲಿಂಕ್ ಬಳಸಿ #ಜನತಾ24   #ವಾಟ್ಸಾಪ್_ಗ್ರೂಪ್ ಸೇರಿರಿ  https://chat.whatsapp.com/Jf6jZ0gyQAEA5GBRpHnkrv

Subscribe YouTube
https://youtube.com/@janataa24?si=XsFcych2GMH0O6Gv

Document

Leave a Reply

Your email address will not be published. Required fields are marked *