Document

Tiptur: ತುಮಕೂರಿನಲ್ಲಿ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡದ ಉದ್ಘಾಟನೆ. 

JANATAA24 NEWS DESK 

 

 

Tiptur: ತುಮಕೂರಿನಲ್ಲಿ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡದ ಉದ್ಘಾಟನೆ.

Tiptur: Inauguration of the new building of the District Banjara Bhavan in Tumkur.

ತಿಪಟೂರು: ದಿನಾಂಕ: 13/12/2025ರ ಶನಿವಾರ ಬೆಳಿಗ್ಗೆ 11 ಗಂಟೆಗೆ ತುಮಕೂರಿನ ಸರಸ್ವತಿ ಪುರಂನಲ್ಲಿ,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ತುಮಕೂರು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ ಸಂಘದ ಸಂಯುಕ್ತಾಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಿ. ನಾರಾಯಣ್ ನಾಯಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

 

ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ,ಉದ್ಘಾಟನಾ ಕಾರ್ಯಕ್ರಮದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭವನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ನೆರವೇರಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕ ತಾಂಡಾಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯಕ್ ಸಮಾರಂಭವನ್ನು ಉದ್ಘಾಟಿಸಲಿದ್ದು,ಉಪ ಸಭಾಪತಿ ರುದ್ರಪ್ಪ ಲಮಾಣಿ, ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಮತ್ತು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನಪರಿಷತ್ ಸದಸ್ಯರು ಸಮಾಜದ ಹಾಲಿ,ಮಾಜಿ ಚುನಾಯಿತ ಜನಪ್ರತಿನಿಧಿಗಳು, ಮುಖಂಡರುಗಳು,ಸಂಘಟನೆಯ ಪದಾಧಿಕಾರಿಗಳು ಹಾಗೂ ಬಂಧುಗಳು ಸಾವಿರ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ತಾಲೂಕಿನ ಸಮಾಜದ ಬಂಧುಗಳು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

 

ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಶಂಕರ್ ಮಾತನಾಡಿ, ಕಾರ್ಯಕ್ರಮಕ್ಕೆ ಮುನ್ನ ಸಮಾಜದ ಮಹಿಳೆಯರ ವೇಷ ಭೂಷಣ ದೊಂದಿಗೆ, ಕಲಾತಂಡಗಳ ಮೆರವಣಿಗೆಯೊಂದಿಗೆ ಆರಂಭವಾಗಲಿದೆ. ಈಗ ನೂತನವಾಗಿ ನಿರ್ಮಾಣಗೊಂಡಿರುವ ಭವನವು ಸಮುದಾಯದ ಪ್ರತಿಯೊಂದು ಕಾರ್ಯಕ್ರಮಕ್ಕೆ ಅನುಕೂಲವಾಗಲೆಂದು ನಿರ್ಮಾಣಗೊಂಡಿದೆ.ತಾಲೂಕುಗಳ ಮುಖಂಡರುಗಳು ಜಿಲ್ಲಾ ಸಂಘದ ಸದಸ್ಯತ್ವವನ್ನು ಪಡೆದುಕೊಳ್ಳಿ. ವಿಶೇಷವಾಗಿ ಸಮುದಾಯ ಭವನದಲ್ಲಿ 15 ಕೊಠಡಿಗಳು ಇದ್ದು, ಜಿಲ್ಲೆಗೆ ಬಂದಂತ ಸಮಯದಲ್ಲಿ ಉಳಿದುಕೊಳ್ಳಲು ಸಹಕಾರಿಯಾಗಲಿದೆ. ಭವನವು ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ. ಇದರ ಉಪಯೋಗವನ್ನು ಸಮಾಜದ ಬಂಧುಗಳು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

 

ತಾಲೂಕು ಶ್ರೀ ಸೇವಾಲಾಲ್ ಲಂಬಾಣಿ ಸಂಘದ ಅಧ್ಯಕ್ಷ ಬಿ.ಟಿ. ಕುಮಾರ್ ಮಾತನಾಡಿ, ಜಿಲ್ಲಾಮಟ್ಟದಲ್ಲಿ ನಮ್ಮ ಸಮುದಾಯದ ಸಹಕಾರಿ ಸಂಘವಿದ್ದು, ಪ್ರತಿಯೊಬ್ಬರು ಶೇರುಗಳನ್ನು ಪಡೆದು, ಸದಸ್ಯರಾಗಿ ಸಹಕಾರಿಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ನಮ್ಮ ಭವನವು ಸುಸಜ್ಜಿತವಾಗಿ ನಿರ್ಮಾಣಗೊಂಡಿದ್ದು ನಮ್ಮಗಳ ಬಹುದಿನಗಳ ಕನಸು ಈಡೇರಿದೆ. ಭವನಕ್ಕೆ ಶ್ರಮಿಸಿದ, ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಅರ್ಪಿಸುತ್ತೇವೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ತಾಲೂಕಿನ ಸಮಾಜದ ಮುಖಂಡರುಗಳು, ಮಹಿಳೆಯರು ಮತ್ತು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತೇವೆ ಎಂದು ತಿಳಿಸಿದರು.

 

ಪತ್ರಿಕಾಗೋಷ್ಠಿಯಲ್ಲಿ ತುಮಕೂರು ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್. ಕುಬೇಂದ್ರ ನಾಯಕ್, ಜಿಲ್ಲಾ ಸಂಘದ ಕಾರ್ಯಧ್ಯಕ್ಷ ಕುಮಾರ್ ನಾಯಕ್(ಬಾಂಬೆ),ಉಪಾಧ್ಯಕ್ಷ ಎಲ್.ಕುಬೇಂದ್ರ ನಾಯಕ್, ಸಂಘಟನಾ ಕಾರ್ಯದರ್ಶಿ ಕೆ.ಎಲ್.

ಸ್ವಾಮಿಲಾಲ್,ನಿವೃತ್ತ ಸೈನಿಕ ಷಣ್ಮುಖ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ರಾಜಾ ನಾಯಕ್, ಸಂಘಟನಾ ಕಾರ್ಯದರ್ಶಿ ರವಿಕುಮಾರ್ ನಾಯಕ್,ಗ್ಯಾಸ್ ಪುಟ್ಟ ನಾಯಕ್ ಮತ್ತು ಲೋಕೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ಹಾಜರಿದ್ದರು.

ವರದಿ: ಮಂಜುನಾಥ್ ಡಿ ತಿಪಟೂರು.


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *