Document

Gubbi: ಜೂ 29 ರಂದು ಡಾ ಖಾದರ್ ಅವರಿಂದ ನೈಸರ್ಗಿಕ ಆಹಾರ ಪದ್ಧತಿಯ ಬಗ್ಗೆ ವಿಶೇಷ ಉಪನ್ಯಾಸ ಹಾಗೂ ಸಂವಾದ.

JANATAA24 NEWS DESK 

 

 

Gubbi: ಜೂ 29 ರಂದು ಡಾ ಖಾದರ್ ಅವರಿಂದ ನೈಸರ್ಗಿಕ ಆಹಾರ ಪದ್ಧತಿಯ ಬಗ್ಗೆ ವಿಶೇಷ ಉಪನ್ಯಾಸ ಹಾಗೂ ಸಂವಾದ.

 

Gubbi

ಗುಬ್ಬಿ : ಜೂನ್ 29 ರಂದು ಗುಬ್ಬಿ ತಾಲ್ಲೂಕಿನ ಹೇರೂರು ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೈಸರ್ಗಿಕ ಆಹಾರ ಪದ್ಧತಿಯ ಕುರಿತು ಆಹಾರ ತಜ್ಞ ಡಾ. ಖಾದರ್ ಅವರಿಂದ ನೈಸರ್ಗಿಕ ಆಹಾರ ಪದ್ಧತಿಯ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ರೈತರು ,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶ್ರೀಗಂಧ ಬೆಳೆಗಾರರ ಮತ್ತು ಬಳಕೆದಾರರ ಅಭಿವೃದ್ಧಿ ಸಂಶೋಧನಾ ಸಂಘದ ರಾಜ್ಯಾಧ್ಯಕ್ಷ ಬಿ ಆರ್ ರಘುರಾವ್ ತಿಳಿಸಿದರು.

 

ಗುಬ್ಬಿ ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು

 

ಇತ್ತೀಚಿನ ದಿನಮಾನ ಗಳಲ್ಲಿ ಜನರು ವಿಷಮುಕ್ತ ಆಹಾರ ಸೇವನೆ ಮಾಡುತ್ತಿದ್ದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ರಾಸಾಯನಿಕ ಗೊಬ್ಬರಗಳಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದ್ದು. ಸಮಾಜದ ಏಳಿಗೆಗಾಗಿ ಸ್ವದೇಶದಲ್ಲಿ ನೆಲೆಸಿ ಸಿರಿಧಾನ್ಯಗಳನ್ನು ಹೆಚ್ಚು ಬಳಸಿ ಜೀವನಕ್ಕೆ ದಾರಿ ಮಾಡಿಕೊಡಬೇಕು, ಹಾಗೂ ಸಿರಿಧಾನ್ಯ ಸೇವನೆಯಿಂದ ರೋಗಮುಕ್ತ ಜೀವನ ನಡೆಸಬೇಕೆಂದು ಈ ನಿಟ್ಟಿನಲ್ಲಿ ಒಂದು ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

 

ನೈಸರ್ಗಿಕ ಕೃಷಿಕ ಅಮ್ಮನಘಟ್ಟ ಶಂಕರಪ್ಪ ಮಾತನಾಡಿ ಇತ್ತೀಚಿನ ದಿನಮಾನಗಳಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಏಕ ಏಕಬೆಳೆ ಪದ್ಧತಿಯನ್ನು ಅನುಸರಿಸುತ್ತಿದ್ದು ಹಣದ ಹಿಂದೆ ಹೋಗುತ್ತಿದ್ದು ಭೂಮಿ ತನ್ನ ಪಲವತ್ತತೆಯನ್ನು ಕಳೆದುಕೊಳ್ಳುತ್ತಿದೆ ಆದ್ದರಿಂದ ಶ್ರೀಗಂಧ ಬೆಳೆಯನ್ನು ಬೆಳೆಯುವುದರಿಂದ ಭೂಮಿಯ ಫಲವತ್ತತೆ ಹೆಚ್ಚಾಗುತ್ತದೆ ಹಾಗೂ ಮರ-ಗಿಡಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹಾಗೂ ರೈತರು ತಮ್ಮ ಜಮೀನುಗಳಲ್ಲಿ ಬಹು ಬಳೆಗಳನ್ನು ಬೆಳೆಯುವ ಮೂಲಕ ನೈಸರ್ಗಿಕ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಿರಿಧಾನ್ಯ ಬಳಕೆಯ ಬಗ್ಗೆ ತಿಳುವಳಿಕೆ ಹೊಂದಬೇಕು ಹಾಗೂಜೂನ್ 29 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

 

ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಅರಣ್ಯ ಅಧಿಕಾರಿ ಶಾಂತರಾಜು, ಆರ್ ವಿ ಪುಟ್ಟಕಾಮಣ್ಣ, ಮೋಹನ್ ಕುಮಾರ್ ಕೊಟ್ಟಿಗೆ ಮನೆ, ಬಿ ವಿ ರಾಜೀವ್, ರಂಗನಾಥ್, ಅಮ್ಮನಘಟ್ಟ ಮಹೇಶ್, ಚೇಳೂರು ವೆಂಕಟೇಶ್ ಸೇರಿದಂತೆ ಇತರರು ಹಾಜರಿದ್ದರು.

 

ವರದಿ : ಶ್ರೀಕಾಂತ್ ಗುಬ್ಬಿ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

https://www.janataa24.com/iasipskas-who-stood-as-the-godfather-of-the/

 

 

https://www.janataa24.com/miscreants-uprooted-40-coconut-trees-turuvekere/

 

 

https://www.janataa24.com/operation-sindor-pok-9-terrorist/

 

Document

Leave a Reply

Your email address will not be published. Required fields are marked *