Document

SIT ತನಿಖೆಗೆ ಕ್ಷಣಗಣನೆ: ಅರೆಸ್ಟ್ ಆಗ್ತಾರ ಪ್ರಜ್ವಲ್ ರೇವಣ್ಣ.? |

Janataa24 NEWS DESK

SIT ತನಿಖೆಗೆ ಕ್ಷಣಗಣನೆ: ಅರೆಸ್ಟ್ ಆಗ್ತಾರ ಪ್ರಜ್ವಲ್ ರೇವಣ್ಣ.? | Prajwal Revanna ‘sex scandal’ | Karnataka govt. announces SIT probe

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಕಳೆದ ಒಂದು ವಾರದಿಂದ ಸೋಶಿಯಲ್ ಮೀಡಿಯಾಗಳಲ್ಲಿ ಬಹಳಷ್ಟು ಸದ್ದು ಮಾಡಿರುತ್ತದೆ. ಸಾಲದಕ್ಕೆ ಚುನಾವಣೆಗೂ ನಾಲ್ಕು ದಿನ ಮುನ್ನ ಹಾಸನದ ಸುತ್ತ ಸಾರ್ವಜನಿಕ ಸ್ಥಳಗಳಲ್ಲಿ ನೂರಾರು ಪೆನ್ ಡ್ರೈವ್ ಗಳು ಸಿಕ್ಕಿರುತ್ತದೆ. ಹಾಸನದ ಗೌರವಾನ್ವಿತ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಹಲವಾರು ಸುದ್ದಿ ಮಾಧ್ಯಮಗಳಲ್ಲಿ ಚುನಾವಣೆಗೂ ಮುನ್ನವೇ ವರದಿಯಾಗಿರುತ್ತದೆ.

ಇದಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ(CM Siddaramaiah)ನವರು ನಿನ್ನೆಯೇ ಟ್ವಿಟ್(X) ಮೂಲಕ ಉತ್ತರಿಸಿದ್ದು ವಿಶೇಷ ತನಿಕಾ ತಂಡವನ್ನು(SIT) ರಚಿಸಿ ತನಿಖೆ ನಡೆಸಲಾಗುವುದು ಎಂದು ಸಾರ್ವಜನಿಕವಾಗಿ ಮಾಹಿತಿ ನೀಡಿದ್ದರು.ಅದರಂತೆ ಇಂದು ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್(Home Minister Dr.G.Parameshwara) ಅವರು ಎಸ್ ಐಟಿ ಇನ್ನು ಕೆಲವೇ ಹೊತ್ತಿನಲ್ಲಿ ತನಿಖೆ ಆರಂಭಿಸಲಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡುವುದು ಅಥವಾ ಬಿಡುವುದು ಎಸ್ ಐಟಿಗೆ ಬಿಟ್ಟ ತೀರ್ಮಾನ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಯಾವುದೇ ಹಸ್ತಕ್ಷೇಪವಿಲ್ಲದೆ ತನಿಖೆ ನಡೆಯಲಿದೆ ಎಂದರು. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಕೂಡ ಇದೆ ಎಂದು ಹೇಳಿದರು.ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದರು.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

ಪ್ರಜ್ವಲ್ ರೇವಣ್ಣ ಜರ್ಮನಿಗೆ?

ಒಂದೆಡೆ ವಿಡಿಯೋ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದ್ದಂತೆ, ಅತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ(KIA) ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ ಅವರು ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ವಿದೇಶಕ್ಕೆ ಹೋದರಾ ಅಥವಾ ತನಿಖೆಗೆ ವಿಶೇಷ ತಂಡ ರಚನೆ ಆಗುತ್ತಿದೆ ಎಂದು ತಿಳಿದು ಹೋದರಾ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

https://www.janataa24.com/fire-accident-coirr-factory-worth-more-than-one/ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

Document

Leave a Reply

Your email address will not be published. Required fields are marked *