JANATAA24 NEWS DESK
Bagalkote: ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಂದ ಬಾಗಲಕೋಟೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ.

ಬಾಗಲಕೋಟೆ: ದಶಕಗಳಿಂದ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕೆಂದು ನಾಡು ನುಡಿ ಪರ ಇರುವ ಸಂಘಟನೆಗಳು ಸಾಕಷ್ಟು ಹೋರಾಟ ಮಾಡಿದ್ದ ಪ್ರತಿಫಲವಾಗಿ ಇಂದು ಬಾಗಲಕೋಟೆ ಜಿಲ್ಲೆಗೆ ವೈದ್ಯಕೀಯ ಕಾಲೇಜು ಸಿದ್ಧವಾಗಲು ಸಜ್ಜಾಗಿದೆ.
ಬಡವರಿಗೂ ವೈದ್ಯಕೀಯ ವಿದ್ಯಾಭ್ಯಾಸ ದೊರಕಲಿ ಎನ್ನುವ ಕಾರಣಕ್ಕೆ ಸರಕಾರಿ ವೈದ್ಯಕೀಯ ಕಾಲೇಜು ಬಾಗಲಕೋಟೆಯಲ್ಲಿ ಮಂಜೂರಾಗಬೇಕೆಂದು ಸಾಕಷ್ಟು ಹೋರಾಟಗಳು ನಡೆದಿದ್ದವು. ಅವೆಲ್ಲಲವನ್ನು ಮನಗೊಂಡ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಲಕೋಟೆಗೆ ಸರಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿದರು. ಬಾಗಲಕೋಟೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು.
ನವನಗರ ಸೆಕ್ಟರ್-1ರಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದೆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಸಚಿವರಾದ ಶರಣಪ್ರಕಾಶ ಪಾಟೀಲ, ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಸೇರಿದಂತೆ ಮಂತ್ರಿಮಂಡಲದ ಸದಸ್ಯರು, ಶಾಸಕರಾದ ಜೆ.ಟಿ.ಪಾಟೀಲ, ಭೀಮಸೇನ ಚಿಮ್ಮನಕಟ್ಟಿ, ವಿಜಯಾನಂದ ಕಾಶಪ್ಪನ್ನವರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಅನಿಲಕುಮಾರ ದಡ್ಡಿ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ರಾಜೇಶ್ ದೇಸಾಯಿ ಬಾಗಲಕೋಟೆ
Chitradurga: ಬೀಕರ, ರಸ್ತೆ ಅಪ*ಘಾತ 3 ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.