JANATAA24 NEWS DESK
Bagalkote: ಉಪಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ– ಜಿಲ್ಲಾಧಿಕಾರಿ ಸಂಗಪ್ಪ ಹೇಳಿಕೆ.

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗವು ಜಾರಿಗೊಳಿಸಿದ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವದರ ಜೊತೆಗೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರು ಸಹಕರಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಬಾಗಲಕೋಟೆ ತಹಶೀಲ್ದಾರ ವಾಸುದೇವ ಸ್ವಾಮಿ, ಹುನಗುಂದ ತಹಶೀಲ್ದಾರ ಡಾ.ಪ್ರದೀಪಕುಮಾರ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ: ರಾಜೇಶ್. ಎಸ್. ದೇಸಾಯಿ ಬಾಗಲಕೋಟೆ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.