Document

Ballari:  ಹಾಸ್ಟೆಲ್ ವಾರ್ಡನ್ ಸೇರಿದಂತೆ 8 ಮಕ್ಕಳ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ,ಓರ್ವ ಸಾವು- ಗುರುಕುಲ ವಸತಿ ಶಾಲೆಯಲ್ಲಿ ಘೋರ ದುರಂತ.

JANATAA24 NEWS DESK 

 

Ballari:  ಹಾಸ್ಟೆಲ್ ವಾರ್ಡನ್ ಸೇರಿದಂತೆ 8 ಮಕ್ಕಳ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ,ಓರ್ವ ಸಾವು- ಗುರುಕುಲ ವಸತಿ ಶಾಲೆಯಲ್ಲಿ ಘೋರ ದುರಂತ.

Ballari gurukul international school murder

 

ಬಳ್ಳಾರಿ:  ನಗರದ ಗುರುಕುಲ ವಸತಿ ಶಾಲೆಯಲ್ಲಿ ಶನಿವಾರ ತಡರಾತ್ರಿ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿಯೋರ್ವ ವಾರ್ಡನ್ ಸೇರಿದಂತೆ 9 ಬಾಲಕರ ಮೇಲೆ ಕಬ್ಬಿಣದ ರಾಡ್​ ನಿಂದ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ಇನ್ನುಳಿದವರು ಗಾಯಗೊಂಡಿದ್ದು ಬಳ್ಳಾರಿ ಬಿಮ್ಸ್ ಮತ್ತು ಟ್ರಾಮಾಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಹಾಸ್ಟೆಲ್​ ನಲ್ಲಿ ಶನಿವಾರ ರಾತ್ರಿ ಊಟ ಮಾಡಿ ಎಲ್ಲ ವಿದ್ಯಾರ್ಥಿಗಳು ಮಲಗಿದ ಮೇಲೆ 9ನೇ ತರಗತಿ ವಿದ್ಯಾರ್ಥಿ ಮಂಚದ ರಾಡ್​ ತೆಗೆದುಕೊಂಡು ದಾಳಿ ಮಾಡಿದ್ದಾನೆ. ವಾರ್ಡನ್ ಸೇರಿ ಅಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಮನಬಂದತೆ ಹಲ್ಲೆ ನಡೆಸಿದ್ದಾನೆ. ಇದರಿಂದ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಇನ್ನುಳಿದವರು ಗಾಯಗೊಂಡಿದ್ದಾರೆ. ಹಲ್ಲೆ ಬಳಿಕ ಆರೋಪಿ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದಾನೆ. ಹಲ್ಲೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಮೃತ ಬಾಲಕನನ್ನು ಆಂಧ್ರಪ್ರದೇಶ ಮೂಲದ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

 

ಬಳ್ಳಾರಿ ಹೊರವಲಯದ ಗುರುಕುಲ ಶಾಲೆಯಲ್ಲಿ ನಿನ್ನೆ ತಡರಾತ್ರಿ ಅಪ್ತಾಪ್ತ ಬಾಲಕನೋರ್ವ ಸಹ ಬಾಲಕರ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ದುರಾದೃಷ್ಟವಶಾತ್ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಓರ್ವ ಬಾಲಕನಿಗೆ ಸ್ವಲ್ಪ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸ್ಟೆಲ್ ವಾರ್ಡನ್ ಮೇಲೂ ಹಲ್ಲೆಯಾಗಿದೆ. ಹಲ್ಲೆ ಮಾಡಿದವನು, ಹಲ್ಲೆಗೊಳಗಾದವರು ಎಲ್ಲರೂ ಅಪ್ತಾಪ್ತರಾಗಿದ್ದಾರೆ. ಸ್ಥಳಕ್ಕೆ ಸುಕೋ ಟೀಂ, ಎಫ್ಎಸ್ಎಲ್ ಟೀಂ ಭೇಟಿ ನೀಡಿದೆ. ಈ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಬಳ್ಳಾರಿ ಐಜಿಪಿ ಹರ್ಷ ತಿಳಿಸಿದ್ದಾರೆ.

 

 

ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ ಮಂಡಳಿಯ ಮುಖ್ಯಸ್ಥರನ್ನು ಸ್ಥಳಕ್ಕೆ ಕರೆಸುವಂತೆ ಎಸ್​ಪಿ ಸುಮನ್ ಡಿ ಪನ್ನೇಕರ್ ಅವರಿಗೆ ಪೋಷಕರು ಒತ್ತಾಯಿಸಿದರು. ‘ಕೇಸ್ ನ ಆಧಾರದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ತೇವೆ’ ಎಂದು ಎಸ್ಪಿ ಸುಮನ್ ಡಿ ಪನ್ನೇಕರ್ ಭರವಸೆ ನೀಡಿದರು.

 

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳ ಪೋಷಕರು ಆಸ್ಪತ್ರೆಗೆ ಆತಂಕದಲ್ಲಿ ಆಗಮಿಸಿದ್ದಾರೆ. ಇನ್ನು ಮೃತ ವಿದ್ಯಾರ್ಥಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

ರಾತ್ರಿ 11.30ವರೆಗೆ ನಮಗೆ ಕರೆ ಮಾಡಿ ಮಾಹಿತಿ ನೀಡಿದರು. ನಾವು ಇಲ್ಲಿಗೆ ಬಂದಾಗ ನಮ್ಮ ಮಗನ ಕೊಲೆಯಾಗಿದೆ ಎಂಬುದು ಗೊತ್ತಾಯಿತು. ಮ್ಯಾನೇಜ್ಮೆಂಟ್ ಅವರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದೇನೆ. ಹಲ್ಲೆ ಮಾಡಿದ ವಿದ್ಯಾರ್ಥಿ ಮಾನಸಿಕ ಅಸ್ವಸ್ಥ ಅಥವಾ ಡ್ರಗ್ಸ್ ಸೇವಿಸಿರಬಹುದು ಎಂದು ಮೃತ ಬಾಲಕನ ತಂದೆ ಲಕ್ಷ್ಮೀಕಾಂತ್ ಅನುಮಾನ ವ್ಯಕ್ತಪಡಿಸಿದ್ದಾರೆ.

 

ನಮ್ಮ ಹುಡುಗನ ಕಳೆದುಕೊಂಡು ತುಂಬಾ ದುಃಖ ಆಗುತ್ತಿದೆ. ಹಲ್ಲೆ ಮಾಡಿದ ವಿದ್ಯಾರ್ಥಿ ಮಾನಸಿಕ ಸ್ಥಿತಿಗತಿಯ ಬಗ್ಗೆ ಹಾಸ್ಟೆಲ್ ನಿರ್ವಾಹಕರು ಗಮನಿಸಬೇಕಿತ್ತು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ರಾಮರೆಡ್ಡಿ ತಿಳಿಸಿದ್ದಾರೆ.

 

 

 

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *