Janatha24 NEWS DESK
Bangalore: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಪುರುಷೋತ್ತಮ ಬಿಳಿಮಲೆ ಅಯ್ಕೆ.

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ವಿದ್ವಾಂಸರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿ(Academy) ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಆಯ್ಕೆಯಾಗಿದ್ದಾರೆ.
ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿ ಬಿಡುಗಡೆಯಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಾನಸ ನೇಮಕಗೊಂಡಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಡಾ. ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಕೃಪಾ ಫಡಕಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿ.ರಮೇಶ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ.ಸ.ಕುಮಾರ್, ಕರ್ನಾಟಕ(Karnataka) ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಶಿವಪ್ರಸಾದ್ ಗೊಲ್ಲಹಳ್ಳಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾತ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು.ಎಚ್. ನೇಮಕಗೊಂಡಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ, ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಪ್ರೊ.ದುರ್ಗಾದಾಸ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಕೊಂಡ ಮಹೇಶ ನಾಚಯ್ಯ ನೇಮಕವಾಗಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
LokaSabha 2024: ಗೊಬ್ಬರ ಕೇಳಿದ ರೈತರಿಗೆ ಗುಂಡು ಹೊಡೆದ ಬಿಜೆಪಿಗೆ ರೈತರೇಕೆ ಮತ ಹಾಕಬೇಕು- CM ಸಿದ್ದರಾಮಯ್ಯ.