JANATAA24 NEWS DESK
Bengaluru: 3.5ಕೋಟಿ ಬೆಲೆಯ ಚಿನ್ನ,ವಜ್ರ,ನಗದು ಕದ್ದು ರಾಜಸ್ಥಾನಕ್ಕೆ ಎಸ್ಕೇಪ್..!
ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು (Yelahanka Poice) ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.
ಜ್ಯುಡಿಷಿಯಲ್ ಲೇಔಟ್‌ನಲ್ಲಿ ಕಳ್ಳತನ ನಡೆದಿತ್ತು. ಮನೆ ಮಾಲೀಕರು ಅಮೆರಿಕದಲ್ಲಿ ಸೆಟಲ್ ಆಗಿದ್ರು. ಆರು ತಿಂಗಳಿಗೊಮ್ಮೆ ಅಥವಾ ವರ್ಷಕ್ಕೊಮ್ಮೆ ಮಾತ್ರ ಬೆಂಗಳೂರಿನ ಮನೆಗೆ ದಂಪತಿ ಬಂದು ಹೋಗುತ್ತಿದ್ದರು. ಈ ನಡುವೆ ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಮೂರು ಬಾರಿ ಮನೆಯ ಮೇಲೆ ಹೋಗಿ ಸ್ಲೈಡ್ ಡೋರ್ ಓಪನ್ ಮಾಡಿ ರೆಡಿ ಮಾಡಿದ್ದ. ಮನೆ ಒಳಗೆ ಹೋಗಿ ಓಡಾಡಿದ್ದ. ಲಾಕರ್ ಓಪನ್ ಮಾಡಿ ಮೂರು ಕೋಟಿ ಬೆಲೆ ಬಾಳುವ 1.8 ಕೆಜಿ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಹಣ ಕಳ್ಳತನ ಮಾಡಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ಸೀದಾ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.
ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲನೆ ವೇಳೆ ಕಳ್ಳತನ ಬೆಳಕಿಗೆ ಬಂದಿದ್ದು, ಸಂಬಂಧಿಕರ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ನನ್ನ ಯಲಹಂಕ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.