JANATAA24 NEWS DESK
Bengaluru: ಡಿಜಿಪಿ ರಾಮಚಂದ್ರ ರಾವ್ ಡಿಸ್ ಮಿಸ್ ಕೂಡ ಆಗಬಹುದು-ಡಾ.ಜಿ. ಪರಮೇಶ್ವರ್.

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ (Ramachandra rao) ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹಸಚಿವ ಜಿ. ಪರಮೇಶ್ವರ್ (G Parameshwar), ಇಂತಹ ಘಟನೆಗಳು ಯಾರಿಗೂ ಗೌರವ ತರೋದಿಲ್ಲ. ಹಾಗಾಗಿ ಎಷ್ಟೇ ದೊಡ್ಡವರಿದ್ದರೂ ಮುಲಾಜಿಲ್ಲದೇ ಕ್ರಮ ಆಗುತ್ತದೆ ಎಂದು ತಿಳಿಸಿದರು.
ಬೆಂಗಳೂರಿನ (Bengaluru) ತಮ್ಮ ನಿವಾಸದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ನನಗೆ ಹುಷಾರಿರಲಿಲ್ಲ, ಮಲಗಿದ್ದೆ. ಮಧ್ಯಾಹ್ನ ಊಟಕ್ಕೆ ಎದ್ದಾಗ ಹೇಳಿದ್ರು. ಆಮೇಲೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದೆ. ಪೊಲೀಸ್ ಇಲಾಖೆ ಮಾತ್ರ ಅಲ್ಲ ಯಾವುದೇ ಇಲಾಖೆಯಲ್ಲೂ ಇಂಥ ಘಟನೆಗಳನ್ನ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಸಿಎಂ ಕೂಡ ಅಪ್ಸೆಟ್ ಆಗಿದ್ದಾರೆ. ಹಾಗಾಗಿ ಎಷ್ಟೇ ದೊಡ್ಡವರಿರಲಿ, ಹಿರಿಯರಿರಲಿ ಕ್ರಮ ಆಗಬೇಕು ಅಂತ ಹೇಳಿದೆ. ಅದಕ್ಕೆ ಸಿಎಂ ಕೂಡ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ರು. ಅಲ್ಲದೇ ಇಂತಹ ಕಠಿಣ ಸನ್ನಿವೇಶದಲ್ಲಿ ನಾವು ಕಠಿಣವಾಗಿಯೇ ಇರಬೇಕಾಗುತ್ತದೆ. ಹಾಗಾಗಿ ನಿನ್ನೆ ನಾನು ಅವರನ್ನ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ರು.
ಡಿಸ್‌ಮಿಸ್ ಕೂಡ ಆಗಬಹುದು
ಇನ್ನೂ ರಾಮಚಂದ್ರ ರಾವ್ ಬಂಧಿಸಬೇಕೆಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿ, ತಕ್ಷಣಕ್ಕೆ ಕ್ರಮ ತಗೊಂಡಿದ್ದೇವೆ, ತನಿಖೆ ಆದ್ಮೇಲೆ ಏನು ಬೇಕಾದರೂ ಆಗಬಹುದು. ಅವರು ಡಿಸ್‌ಮಿಸ್ ಕೂಡ ಆಗಬಹುದು. ತಕ್ಷಣಕ್ಕೆ ಆಕ್ಷನ್ ತೆಗೆದುಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಅಮಾನತು ಮಾಡಿದ್ದೇವೆ. ಯಾವುದೇ ಮುಲಾಜಿ ಇಲ್ಲದೇ ಸೀನಿಯರ್ ಆಫೀಸರ್ ಅನ್ನೋದನ್ನೂ ನೋಡದೆ ಕ್ರಮ ತೆಗೆದುಕೊಂಡಿದ್ದೇವೆ. ತನಿಖೆಯಲ್ಲಿ ಏನು ಬರುತ್ತೆ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅಂತ ವಿವರಿಸಿದ್ರು.
ಏನಿದು ಪ್ರಕರಣ.?
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಬ್ಬರ ಜೊತೆಗೆ ಮುತ್ತಿಕ್ಕುವ ಹಸಿ ಬಿಸಿ ದೃಶ್ಯಗಳ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಹೊರ ಬರುತ್ತಿದ್ದಂತೆ ಕರ್ನಾಟಕ ಪೊಲೀಸ್ ಇಲಾಖೆ ಮಾನ ಹರಾಜಾಗಿದೆ. ಇಂಥಹ ಅಧಿಕಾರಿಗಳು ಇಲಾಖೆಗೆ ಕಪ್ಪು ಚುಕ್ಕೆ ಎಂದೆಲ್ಲ ಜನರು ಕಿಡಿ ಕಾರಿದ್ದಾರೆ.
ಸದ್ಯ ಡಿಸಿಆರ್‌ಇ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಮಚಂದ್ರ ರಾವ್ ಅವರು ಕಚೇರಿಯಲ್ಲಿದ್ದಾಗ ಇಲಾಖೆ ಯೂನಿಫಾರ್ಮ್‌ನಲ್ಲಿಯೇ ಮಹಿಳೆಗೆ ಮುತ್ತಿಕ್ಕಿದ್ದಾರೆ. ಬೇರೆ ಬೇರೆ ವಿಡಿಯೋಗಳ ಇದ್ದು, ಸೂಟ್‌ನಲ್ಲಿ ಮಹಿಳೆ ಜೊತೆಗಿರುವ ವಿಡಿಯೋಗಳು ಹರಿದಾಡುತ್ತಿವೆ. ವಿಶೇಷ ಎಂದರೆ ಅಕ್ರಮ ಚಿನ್ನ ಕಳ್ಳಸಾಗಾಣೆ ಮಾಡಿದ್ದ ನಟಿ ರನ್ಯಾ ರಾವ್ ಇವರು ಮಗಳು. ರನ್ಯಾ ರಾವ್ ಪ್ರಕರಣ ಬೆಳಕಿಗೆ ಬರುವ ಮೊಲದೇ ನಡೆದಿದ್ದ ಡಿಜಿಎಪಿಯ ರಾಸಲೀಲೆಯ ವಿಡಿಯೋಗಳು ಇವೆ ಎಂದು ತಿಳಿದು ಬಂದಿದೆ.
ಕಚೇರಿಯಲ್ಲಿ ಪೊಲೀಸ್ ಯೂನಿಫಾರ್ಮ್‌ನಲ್ಲಿ ಕುಳಿತ ಡಿಜಿಪಿ ರಾಮಚಂದ್ರ ರಾವ್ ಅವರು ಮಹಿಳೆಗೆ ಮುತ್ತು ಕೊಡುವುದು, ಕೂತಲ್ಲಿಯೇ ಮಹಿಳೆ ತಬ್ಬಿಕೊಳ್ಳುವ ಹಸಿಬಿಸಿ ದೃಶ್ಯಗಳು ವಿಡಿಯೋದಲ್ಲಿವೆ.
ರಾಮಚಂದ್ರ ರಾವ್ ಫಸ್ಟ್ ರಿಯಾಕ್ಷನ್
ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಭೇಟಿಯಾಗಲು ಡಿಜಿಪಿ ರಾಮಚಂದ್ರ ರಾವ್ ಅವರು ಆಗಮಿಸಿದ್ದರು. ಈ ವೇಳೆ ಸಚಿವರು ನಿರಾಕರಿಸಿದ್ದಾರೆ. ಆಗ ಹೊರಗಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ರಾಮಚಂದ್ರ ರಾವ್ ಅವರು, ಇದು ಒಂದು ವರ್ಷದ ಹಿಂದಿನದ್ದು ಎಂಬಂತೆ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸೇವೆಯಲ್ಲಿದ್ದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಬಳಿಕ ಇದೆಲ್ಲ ಷಡ್ಯಂತ್ರ. ಈ ವಿಡಿಯೋ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ. ಇದರಿಂದ ನನ್ನ ಮರಿಯಾದೆ ಹಾಳಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆಯ ವಿಡಿಯೋ ಪ್ರಕರಣ ಸಾಕಷ್ಟು ಮುಜುಗರ ತಂದಿದೆ. ಈಗಾಗಲೇ ಡ್ರಗ್ಸ್ ಹಾಗೂ ಅಪರಾಧ ಕೃತ್ಯಗಳಲ್ಲಿ ಪೊಲೀಸರು ಕೈ ಜೋಡಿಸಿದ್ದರು ಎಂದು ಕೆಲವು ಅಧಿಕಾರಿಗಳು ಅಮಾನತ್ತಾಗಿದ್ದರು. ಇದೀಗ ಹಿರಿಯ ಅಧಿಕಾರಿ ಸರ್ಕಾರಿ ಕಚೇರಿಯಲ್ಲೇ ಈ ರೀತಿ ಮಾಡಿರುವುದು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.
ಕಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.