Janataa24 NEWS DESK
Bengaluru: 24 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ CCB ಪೋಲೀಸ್.

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ₹24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
‘ಬಂಧಿತ ಮಹಿಳೆಯಿಂದ 12 ಕೆ.ಜಿ ಎಂಡಿಎಂಎ ಕ್ರಿಸ್ಟಲ್, ಒಂದು ಮೊಬೈಲ್, 70 ಏರ್‌ಟೇಲ್ ಸಿಮ್ ಕಾರ್ಡ್‌ಗಳನ್ನೂ ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹24 ಕೋಟಿ ಎಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರಿನ ಟಿ.ಸಿ. ಪಾಳ್ಯದಲ್ಲಿ ತಂಗಿದ್ದ ಶಂಕಿತ ಮಹಿಳೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ(CCB) ಪೊಲೀಸರು ದಾಳಿ ನಡೆಸಿದ್ದಾರೆ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಈವರೆಗೆ ನಡೆಸಿದ ಅತಿದೊಡ್ಡ ಡ್ರಗ್ಸ್ ಕಾರ್ಯಾಚರಣೆ ಇದಾಗಿದೆ. ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮತ್ತೋರ್ವ ವಿದೇಶಿ ಮಹಿಳೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/iasipskas-who-stood-as-the-godfather-of-the/
Tumakuru: ಅಗ್ನಿ ಅವಘಡ ವಿಶ್ವವಿದ್ಯಾಲಯದ ಬಳಿ ಮೂರು ಮಳಿಗೆಗಳಲ್ಲಿ ಆಕಸ್ಮಿಕ ಬೆಂಕಿ.