JANATAA24 NEWS DESK
Bengaluru: ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಡೆತ್ ನೋಟ್ ಬರೆದಿಟ್ಟು ನೇ*ಗೆ* ಶರಣು.

ಬೆಂಗಳೂರು: ಕನ್ನಡ ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಗುರುತಿಸಿಕೊಂಡಿದ್ದ ನಟಿ ನಂದಿನಿ, ರಾಜರಾಜೇಶ್ವರಿ ನಗರದ ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ನಂದಿನಿ ಅವರು ಈ ನಿರ್ಧಾರಕ್ಕೆ ಬರಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.
ನಂದಿನಿ ಆತ್ಮಹತ್ಯೆಗೆ ಕಾರಣ ಏನು?
ನಟಿ ನಂದಿನಿ ಸಿಎಂ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದೆ. ಇದರಲ್ಲಿ ತನ್ನ ಪೋಷಕರಿಗೆ ಉದ್ದೇಶಿಸಿ ಬರೆದಿರುವ ಅವರು ಹೇಳಿರುವುದು ಹೀಗೆ, ʻಮದುವೆಯಾಗುವಂತೆ ಪೋಷಕರು ನೀಡುತ್ತಿದ್ದ ಒತ್ತಡವನ್ನು ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮದುವೆಗೆ ನಾನು ಮಾನಸಿಕವಾಗಿ ಸಿದ್ಧಳಿಲ್ಲ . ಇದರೊಂದಿಗೆ ಇತರ ಕೆಲವು ವೈಯಕ್ತಿಕ ಕಾರಣಗಳಿಂದ ತಾವು ಖಿನ್ನತೆಯಿಂದ ಬಳಲುತ್ತಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡದ ಯಾವ ಸೀರಿಯಲ್‌ನಲ್ಲಿ ನಟನೆ?
ನೀನಾದೆನಾ, ಜೀವ ಹೂವಾಗಿದೆ, ಸಂಘರ್ಷ, ಮಧುಮಗಳು ಸೀರಿಯಲ್‌ನಲ್ಲಿ ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಿದ್ದರು ನಂದಿನಿ. ಈ ಧಾರವಾಯಿಯಲ್ಲಿ ನಂದಿನಿ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು. ಇದರಲ್ಲಿ ಅವರು ಕನಕ ಮತ್ತು ದುರ್ಗ ಎಂಬ ಎರಡು ಸವಾಲಿನ ಪಾತ್ರಗಳನ್ನು ನಿರ್ವಹಿಸಿ ಜನರ ಮೆಚ್ಚುಗೆ ಗಳಿಸಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.