JANATAA24 NEWS DESK
Bengaluru: MBA ವಿದ್ಯಾರ್ಥಿನಿ ಅನುಮಾನಾಸ್ಪದ ಸಾ*ವು*

ಬೆಂಗಳೂರು: ದಾವಣಗೆರೆ ಮೂಲದ ಯುವತಿ ಸುಪ್ರಿಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರದ (Subramanyanagar) ಮಿಲ್ಕ್ ಕಾಲೋನಿಯಲ್ಲಿ ನಡೆದಿದೆ.
ಸುಪ್ರಿಯಾ (25) ಮೃತ ಯುವತಿ. ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.
ಎಂಬಿಎ (MBA) ವ್ಯಾಸಂಗ ಮಾಡ್ತಿದ್ದ ಸುಪ್ರಿಯಾ, ಬೈಕ್ ತರಬೇತಿ ಕೂಡ ಪಡೆಯುತ್ತಿದ್ದಳು. ಮಿಲ್ಕ್ ಕಾಲೋನಿಯಲ್ಲಿ ಕಳೆದ 2 ವರ್ಷ 8 ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. 3ನೇ ಫ್ಲೋರ್‌ನಲ್ಲಿದ್ದ ಸುಪ್ರಿಯಾ ಮನೆ ಬಾಗಿಲು ಕಳೆದ 2 ದಿನಗಳಿಂದಲೂ ಬಂದ್ ಆಗಿತ್ತು. ಅನುಮಾನಗೊಂಡ ಮನೆ ಮಾಲೀಕ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಫ್ಯಾನ್‌ಗೆ ನೇಣು ಬಿಗಿದು ತುಂಡಾಗಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯುಡಿಆರ್ (Un-Natural Death Report) ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.