Janataa24 NEWS DESK
Bengaluru: ಸಿಗರೇಟ್ ತಂದುಕೊಡಲ್ಲ ಅಂದಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಕೊ**.

ಬೆಂಗಳೂರು: ಸ್ನೇಹಿತನ ಜೊತೆ ಕುಳಿತಿದ್ದಾಗ ಸಿಗರೇಟ್ ತಂದು ಕೊಡಲ್ಲ ಎಂದಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಕೊಲೆ ಮಾಡಿದ್ದಾರೆ. ಬೆಂಗಳೂರಿನಲ್ಲಿ (Bengaluru) ಬೇರೆ ಜಿಲ್ಲೆಯವರು ಬದುಕುವುದು ಹೇಗೆ ಎಂದು ಕೊಲೆಯಾದ ಟೆಕ್ಕಿ ಸಂಜಯ್ ತಂದೆ ನಾರಾಯಣ್ ಹೇಳಿದ್ದಾರೆ.
ಸಿಗರೇಟ್ ವಿಚಾರಕ್ಕೆ ಕಾರು ಗುದ್ದಿಸಿ ಟೆಕ್ಕಿ (Techie) ಸಂಜಯ್ ಹತ್ಯೆ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಷ್ಟಪಟ್ಟು ಮಗನನ್ನು ಎಂಜಿನಿಯರಿಂಗ್ ಓದಿಸಿದ್ದೆವು. ಕ್ಯಾಂಪಸ್ ಸೆಲೆಕ್ಷನ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಕೊಲೆ ಮಾಡಿದವನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷೇತ್ರದವನು. ಅವರೇ ನಮಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.
ಮಗನಿಗೆ ಇನ್ನೊಂದು ವಾರದಲ್ಲಿ ಮದುವೆ ನಿಶ್ಚಿತಾರ್ಥ ಇತ್ತು. ಈ ಸರ್ಕಾರದಲ್ಲಿ ಇಂತಹ ಘಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕಾನೂನು ಇಲ್ಲವೇ? ಯಾರಿಗೂ ಭಯವೇ ಇಲ್ಲವೇ? ಅಮಾಯಕನನ್ನು ಕೊಂದು ಹಾಕಿದ್ದಾರೆ. ಅಂತಹವರಿಗೆ ಮರಣದಂಡನೆ ವಿಧಿಸಬೇಕು. ಸರ್ಕಾರ ನನ್ನ ಮಗನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
Bengaluru Techie Death Case: ಪ್ರಕರಣ ಏನು?
ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಹಾಗೂ ಕಾರಿನಲ್ಲಿದ್ದ ಪ್ರತೀಕ್ ನಡುವೆ ಗಲಾಟೆ ನಡೆದಿತ್ತು.
ಗಲಾಟೆ ಜೋರಾಗಿ ಅಂಗಡಿಯವರು ಬಿಡಿಸಿ ಕಳುಹಿಸಿದ್ದರು. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ, ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರ್ತಿಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರಂಭದಲ್ಲಿ ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರಿಗೆ ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲನೆ ವೇಳೆ ಅಸಲಿ ವಿಚಾರ ಬಯಲಿಗೆ ಬಂದಿದೆ. ಸುಬ್ರಮಣ್ಯಪುರ ಪೊಲೀಸರು ಆರೋಪಿ ಪ್ರತೀಕ್‌ನನ್ನು ಬಂಧಿಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.