Janataa24 NEWS DESK
BJP_TICKET: ಅನಂತ್ ಕುಮಾರ್ ಹೆಗ್ಡೆ ಗೆ ಕೋಕ್- ಕಾಗೇರಿ, ಜಗದೀಶ್ ಶೆಟ್ಟರ್, ಸುಧಾಕರ್ ಗೆ ಟಿಕೆಟ್

ನವದೆಹಲಿ: ಲೋಕಸಭಾ ಚುನಾವಣೆ ಕರ್ನಾಟಕದಲ್ಲಿ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಬಹಿರಂಗವಾಗಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬೆಳಗಾವಿ – ಜಗದೀಶ್ ಶೆಟ್ಟರ್
ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ – ಡಾ.ಕೆ. ಸುಧಾಕರ್
ರಾಯಚೂರು – ರಾಜಾ ಅಮರೇಶ್ ನಾಯಕ್
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadeesh Shettar) ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿ ಮಣೆ ಹಾಕಿದೆ. ಇತ್ತೀಚಿಗೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಕಳೆದ ನಾಲ್ಕು ವರ್ಷದಿಂದ ಯಾವುದೇ ಕೆಲಸ ಮಾಡದೆ ಯಾರ ಕಣ್ಣಿಗೂ ಕಾಣಿಸದೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಕ್ಕೆ ತಲೆ ನೋವಾಗುವ ಹೇಳಿಕೆಗಳನ್ನು ನೀಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಮಗನೇ ಎಂದು ಸಂಭೋಧಿಸಿ ಸ್ವತಹ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ನಿಶ್ಚಿತ ಎಂಬ ಹೇಳಿಕೆ ನೀಡಿದ್ದರು. ಸಂವಿಧಾನ ತಿದ್ದುಪಡಿಯ ಹೇಳಿಕೆ ನೀಡಿದ ಬಳಿಕ ಅನಂತ್‌ಕುಮಾರ್ ಹೆಗಡೆ ಗೆ ಟಿಕೆಟ್ ಕೈ ತಪ್ಪಿದೆ. ಮಾಜಿ ಸ್ಪೀಕರ್ ಪಕ್ಷನಿಷ್ಠ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwara Hegde Kageri) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಗಾಸಿಪ್ ಗಳು ಅಲ್ಲಲ್ಲಿ ಕೇಳಿ ಬಂದಿತ್ತಾದರೂ ಮಾಜಿ ಸಚಿವ ಕೆ. ಸುಧಾಕರ್ ಗೆ ಕೊನೆಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಬಿಜೆಪಿ ಹೈಕಮಾಂಡ್‌ನಿಂದ ಟಿಕೆಟ್ ಪಡೆದಿದ್ದಾರೆ. 4 ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಿಸುವುದರ ಮೂಲಕ ಬಿಜೆಪಿ ರಾಜ್ಯದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ಮಂಡ್ಯ, ಕೋಲಾರ, ಹಾಸನ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಮೈತ್ರಿ ಒಪ್ಪಂದ ಆಗಿದೆ.
https://www.janataa24.com/pavagada-ಪಾವಗಡದಲ್ಲಿ-ಮೇವು-ನೀರಿಗೆ/
https://www.janataa24.com/lokayukta-gets-25-lakhs-bribe-of-muda-commissioner-l/
https://www.janataa24.com/hd-devegowda-deve-gowda-complains-to-election-commis/
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv