Document

Chitradurga:  ಬೀಕರ, ರಸ್ತೆ ಅಪ*ಘಾತ 3 ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು.

JANATAA24 NEWS DESK 

Chitradurga: ಬೀಕರ, ರಸ್ತೆ ಅಪ*ಘಾತ 3 ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು.

Chitradurga- road accident, 3 sub-inspectors died on the spot.

 

ಚಿತ್ರದುರ್ಗ: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

 

ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್‌ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮೃತರು ರಜೆಯಲ್ಲಿದ್ದ ಕಾರಣ ಪರಿಹಾರ ನೀಡಲು ಇರುವ ಕಾನೂನು ತೊಡಕುಗಳ ಬಗ್ಗೆ ಪರಿಶೀಲಿಸಿ ನೆರವು ನಿಡುವುದಾಗಿ ಭರವಸೆ ನೀಡಿದ್ದಾರೆ.

ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

 

ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು.ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು.

 

 

Lokayukta: ಅಬಕಾರಿ ಡಿಸಿ ಮನೆ ಸೇರಿದಂತೆ 15ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *