Document

Chitradurga: ಮಗಳಿಗೆ ಮದುವೆ ನಿಶ್ಚಯವಾಗಿದೆ ಸ್ವಾಮಿ–ಸುಟ್ಟ ಬಸ್​​ನಲ್ಲಿ ಮಗಳನ್ನ ಹುಡುಕಿದ ತಂದೆ

JANATAA24 NEWS DESK 

 

 

Chitradurga: ಮಗಳಿಗೆ ಮದುವೆ ನಿಶ್ಚಯವಾಗಿದೆ ಸ್ವಾಮಿ–ಸುಟ್ಟ ಬಸ್​​ನಲ್ಲಿ ಮಗಳನ್ನ ಹುಡುಕಿದ ತಂದೆ.

Chitradurga: Father finds daughter in burnt bus, says Swami, his daughter's marriage is fixed
ಚಿತ್ರದುರ್ಗ: ಹಿರಿಯೂರು ಪಟ್ಟಣದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಒಟ್ಟು ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸ್ತುತ ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

 

‘ಮಗಳಿಗೆ ಮದುವೆ ಫಿಕ್ಸ್ ಆಗಿತ್ತು’
ಅಪಘಾತದ ವಿಚಾರ ಗೊತ್ತಾಗ್ತಿದ್ದಂತೆ ಓಡೋಡಿ ಬಂದ ನವ್ಯಾ ತಂದೆ ಮಂಜಪ್ಪ, ದುರಂತದ ಜಾಗದಲ್ಲಿ ಮಗಳು ಕಾಣ್ತಿಲ್ಲ, ಆಸ್ಪತ್ರೆಯಲ್ಲೂ ನನ್ನ ಮಗಳೇ ಇಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನವ್ಯಾ, ಮಾನಸ, ಮಿಲನ ಒಟ್ಟಿಗೆ ಕೆಲಸ ಮಾಡುತ್ತಿದ್ದರು‌. ಏಪ್ರಿಲ್ ನಲ್ಲಿ ನನ್ನ ಮಗಳ ಮದುವೆ ನಿಶ್ಚಯ ಆಗಿತ್ತು. ಈಗ ನನ್ನ ಮಗಳೇ ಕಾಣ್ತಿಲ್ಲ ಎಂದು ತಂದೆ ಕಣ್ಣೀರು ಹಾಕಿದ್ದಾರೆ.

ಬಸ್​ನಲ್ಲಿ ಬರ್ತಿದ್ದ ನವ್ಯಾ, ಮಾನಸ ಮಿಸ್ಸಿಂಗ್
ನವ್ಯಾ, ಮಾನಸ, ಮಿಲನಾ ಎಂಬ ಮೂವರು ಯುವತಿಯರು ಇದೇ ಬಸ್​​ನಲ್ಲಿ ಪ್ರಯಾಣ ಮಾಡ್ತಿದ್ರು. ಅಪಘಾತದ ಬಳಿಕ ಕಿಟಕಿ ಗಾಜಿನ ಮೂಲಕ ಮಿಲನಾ ಹೊರಬಂದಿದ್ದಾರೆ. ಆದ್ರೆ ಜೊತೆಯಲ್ಲೇ ಇದ್ದ ನವ್ಯಾ, ಮಾನಸ ನಾಪತ್ತೆಯಾಗಿದ್ದಾರೆ. ಚನ್ನರಾಯಪಟ್ಟಣದಿಂದ ಮಗಳನ್ನು ಹುಡುಕಿಕೊಂಡು ಬಂದ ತಂದೆ ಸುಟ್ಟ ಬೂದಿ ಕಂಡು ಕಣ್ಣೀರು ಹಾಕ್ತಿದ್ದಾರೆ.

ಬೆಂಕಿಯಲ್ಲಿ ಬೆಂದು ಕರಕಲಾಗಿರುವ ಮೃತದೇಹಗಳ ಗುರುತು ಪತ್ತೆ ಮಾಡೋದೇ ಸವಾಲಿನ ಕೆಲಸವಾಗಿದೆ. ಈ ಮಧ್ಯೆ ತಂದೆಯೊಬ್ಬರು ಮಗಳ ಮೃತದೇಹ ಪತ್ತೆಹಚ್ಚಿದ್ದಾರೆ. ಕೊರಳಲ್ಲಿದ್ದ ಸರ ನೋಡಿ ಇವಳೇ ನನ್ನ ಮಗಳು ಎಂದು ಗುರುತು ಹಿಡಿದಿದ್ದಾರೆ.

 

 

ಅಂದ್ಹಾಗೆ ಜೀವ ಕಳೆದುಕೊಂಡ ಹೆಣ್ಮಗಳ ಹೆಸರು ಮಾನಸ. ತಂದೆ ಚಂದ್ರಗೌಡ ನೀಡಿದ ಮಾಹಿತಿಯಂತೆ, ಮಾನಸ ಮೂಲತಃ ಚನ್ನರಾಯಪಟ್ಟಣದವಳು. ನನ್ನ ಮಗಳು ಶನಿವಾರ ಅಥವಾ ಭಾನುವಾರ ಊರಿಗೆ ಬರ್ತೀನಿ ಎಂದಿದ್ದಳು. ಆಮೇಲೆ ಮದುವೆ ಡೇಟ್ ಫಿಕ್ಸ್ ಮಾಡೋಣ ಅಂತ ಹೇಳಿದ್ದಳು. ಆಕೆಗೆ ಮದುವೆ ಫಿಕ್ಸ್ ಆಗಿತ್ತು ಎಂದು ಕಣ್ಣೀರು ಇಟ್ಟಿದ್ದಾರೆ.

 

 


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *