Janataa24 NEWS DESK
CM Siddaramaiah: ಸಿಎಂ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ…!

ಮೈಸೂರು: ದಿನದಿಂದ ದಿನಕ್ಕೆ ರೋಚಕ ಸ್ವರೂಪ ಪಡೆಯುತ್ತಿರುವ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಪ್ರತಾಪ್ ಸಿಂಹ ಹೇಳಿಕೆ ಅಚ್ಚರಿ ಮೂಡಿಸಿ ಬಿಜೆಪಿಗರಲ್ಲಿ ಆತಂಕ ಮೂಡಿಸಿದ್ದಾರೆ. ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆ ಸಂದರ್ಭದಲ್ಲಿ ಯದುವೀರ್ ಒಡೆಯರ್ ವಿರುದ್ಧ ವ್ಯಂಗ್ಯವಾಡಿ, ನಂತರ ಅವರ ಜೊತೆ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಇದೀಗ ಮತ್ತೊಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಒಡೆಯರ್ ವಿರುದ್ಧ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಸಮರ್ಥಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Soddaramaiah) ವ್ಯಂಗ್ಯವಾಗಿ, ‘ಯಾರು ರಾಜ?’ ಎಂದು ಪ್ರಶ್ನಿಸಿದ್ದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ಹುಳುಕು ಹುಡುಕುವುದು ತಪ್ಪು. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ ಎಂದು ಹೇಳಿದ್ದಾರೆ.
ಯದುವೀರ್ರನ್ನು ಈಗ ಯಾರಾದರೂ ಮಹಾರಾಜ ಎಂದು ಕರೆಯುತ್ತಾರೆಯೇ ಅಥವಾ ಬಿಜೆಪಿ ಅಭ್ಯರ್ಥಿ ಎಂದು ಕರೆಯುತ್ತೀರಾ ಎಂದು ಪ್ರತಾಪ್ ಸಿಂಹ ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದ್ದಾರೆ. ಮುಂದುವರಿದು, ಯದುವೀರ್ ಒಡೆಯರ್ ಈಗ ಅರಮನೆಗೆ ಸೀಮಿತವಾಗಿರದೆ ಜನಪ್ರತಿನಿಧಿಯಾಗಲು ಬಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಕರೆದಿರುವುದರಲ್ಲಿ ತಪ್ಪಿಲ್ಲ ಎಂದು ಪ್ರತಾಪ್ ಸಿಂಹ ಸಮರ್ಥನೆ ಮಾಡಿದ್ದಾರೆ.
ನಂತರದಲ್ಲಿ ಅವರ ಮುನಿಸಿಗೆ ತೇಪೆ ಹಚ್ಚುವಲ್ಲಿ ರಾಜ್ಯ ಬಿಜೆಪಿ ನಾಯಕರು ಯಶಸ್ವಿಯಾಗಿದ್ದರು. ಆ ನಂತರ ಯದುವೀರ್(Yaduveer) ಜೊತೆ ಕಾಣಿಸಿಕೊಂಡಿರುವ ಪ್ರತಾಪ್ ಸಿಂಹ, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಡೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದರು
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube