JANATAA24 NEWS DESK
CN Halli: ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡಿದರೆ ಅನ್ಯಾಯ– ಮಾದಿಗ ಸಮುದಾಯದ ಆತಂಕ.

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಮಾದರ ಮಹಾ ಸಭೆ ವತಿಯಿಂದ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಬಾಬು ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿನ 56,432 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲು ದಿನಾಂಕ 27.02.2026 ರಂದು ಸೂಚಿಸಿರುವ ಹಿನ್ನೆಲೆಯಲ್ಲಿ, ಈ ನೇಮಕಾತಿಯನ್ನು ಒಳಮೀಸಲಾತಿ ಅಳವಡಿಸದೇ ನಡೆಸುವ ಸಾಧ್ಯತೆ ಇರುವುದರಿಂದ ಸಮುದಾಯದ ಪರವಾಗಿ ಆತಂಕ ವ್ಯಕ್ತಪಡಿಸಲಾಯಿತು. ಸರ್ಕಾರ ಒಂದು ಕಡೆ ಒಳಮೀಸಲಾತಿ ಜಾರಿಗೆ ಆದೇಶ ನೀಡಿದ್ದು, ಮತ್ತೊಂದೆಡೆ ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಅನುಸರಿಸದಿರುವುದು ಸಮುದಾಯಕ್ಕೆ ಅನ್ಯಾಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು.
ಈಗಾಗಲೇ ಒಳಮೀಸಲಾತಿ ಕುರಿತ ಕಾಯ್ದೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಅಂಕಿತವೂ ಪಡೆದಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕೆಂದು ಶಾಸಕರನ್ನು ಒತ್ತಾಯಿಸಲಾಯಿತು. ಇಲ್ಲವಾದಲ್ಲಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕರ ಭವಿಷ್ಯಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಚಂದ್ರಶೇಖರ್ ಮಾದಿಗ ದಂಡೋರ ಅಧ್ಯಕ್ಷರು, ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ ಗುರುಮೂರ್ತಿ ,ಚನ್ನಕೇಶವ ಮಾಜಿ ಅಧ್ಯಕ್ಷರು,ಕೆಡಿಪಿ ಸದಸ್ಯರಾದ ಶಂಕರ್ ಮತ್ತು ಕಾನೂನು ವಿದ್ಯಾರ್ಥಿ ದೇವರಾಜು ಉಪಸ್ಥಿತರಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.