JANATAA24 NEWS DESK
CN Halli: ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದ ವಿದ್ಯಾರ್ಥಿನಿಯ ನೆರವಿಗೆ ಬಂದ ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್.

ಚಿಕ್ಕನಾಯಕನಹಳ್ಳಿ: ಶಿಕ್ಷಣವು ಪ್ರತಿಯೊಬ್ಬರ ಹಕ್ಕು, ಆದರೆ ಆರ್ಥಿಕ ಸಂಕಷ್ಟದ ಕಾರಣಕ್ಕೆ ಅದು ಅರ್ಧಕ್ಕೆ ನಿಲ್ಲಬಾರದು ಎಂಬ ಮಾನವೀಯ ಉದ್ದೇಶದಿಂದ ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್(ರಿ) ವಿದ್ಯಾರ್ಥಿನಿಯೊಬ್ಬಳ ಬಾಕಿ ಶುಲ್ಕದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ಮೂಲಕ ಮಾದರಿಯಾಗಿದೆ.
ಚಿಕ್ಕನಾಯಕನಹಳ್ಳಿಯ ಅಲೆಮಾರಿ ಸಮುದಾಯದ ನಿವಾಸಿಯಾದ ಶಾಂತರಾಜು (ಟ್ರಸ್ಟ್‌ನ ಸಕ್ರಿಯ ಸದಸ್ಯರು) ಅವರ ಪುತ್ರಿ ಕೀರ್ತಿ ಎಸ್ ಅವರು ತಿಪಟೂರಿನ ಕಲ್ಪತರು ಶಿಕ್ಷಣ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ ಬಿ.ಎಡ್. ಪ್ರವೇಶಾತಿ ಪಡೆದಿದ್ದರು. ಆದರೆ ವೈಯಕ್ತಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೆ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಬಾಕಿ ಇದ್ದ ಮೂರು ಸೆಮಿಸ್ಟರ್‌ಗಳ ಒಟ್ಟು **84,000 ರೂ.**ಗಳ ಶುಲ್ಕವನ್ನು ಪಾವತಿಸುವುದು ಕುಟುಂಬಕ್ಕೆ ದೊಡ್ಡ ಆರ್ಥಿಕ ಹೊರೆಯಾಗಿತ್ತು.ಅಲೆಮಾರಿ ಸಮುದಾಯದ ಮಕ್ಕಳು ಓದುವುದೇ ಕಷ್ಟದಲ್ಲಿ ಆದರೆ ಈ ಹೆಣ್ಣುಮಗಳು ಡಿಗ್ರಿ ಕಷ್ಟಪಟ್ಟು ಓದಿದ್ದಲ್ಲದೆ ಇನ್ನು ಓದುತ್ತೇನೆ ಎನ್ನುವ ಧೈರ್ಯ ಮತ್ತು ಆಸಕ್ತಿ ತೋರುತ್ತಿದ್ದಾಳೆ ಆದ್ದರಿಂದ ನಮಗೆ ಖುಷಿ ತಂದಿದೆ ಎಂದರು KS ಮಂಜುನಾಥ್.
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಟ್ರಸ್ಟ್‌ನ ಅಧ್ಯಕ್ಷರಾದ ತೇಜ DS ಹಾಗೂ ಮಂಜುನಾಥ KS ದಂಪತಿಗಳು, ಕಲ್ಪತರು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದರು. ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ಜಗದೀಶಮೂರ್ತಿ ಟಿ. ಯು. ಮತ್ತು ಉಪಾಧ್ಯಕ್ಷರಾದ ಶ್ರೀ ಬಿ. ಎಸ್. ಉಮೇಶ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾನವೀಯ ನೆಲಗಟ್ಟಿನ ಮೇಲೆ ಬಾಕಿ ಮೊತ್ತದಲ್ಲಿ ರಿಯಾಯಿತಿ ನೀಡಲು ನಿರ್ಧರಿಸಲಾಯಿತು.
ಬಾಕಿ ಇದ್ದ ಒಟ್ಟು ಮೊತ್ತದಲ್ಲಿ ಗಣನೀಯ ರಿಯಾಯಿತಿ ನೀಡಿ ವಿಷಯವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಯಿತು.
ಬಾಕಿ ಮೊತ್ತದ ಪೈಕಿ 20,000 ರೂ.ಗಳನ್ನು ಅಧ್ಯಕ್ಷರಾದ ತೇಜ DS ಹಾಗೂ ಮಂಜುನಾಥ KS ದಂಪತಿಗಳೇ ಪಾವತಿಸಿದರು.
ವಿದ್ಯಾರ್ಥಿನಿಯ ಉನ್ನತ ಶಿಕ್ಷಣಕ್ಕೆ ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಟ್ರಸ್ಟ್ ಭರವಸೆ ನೀಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಪದಾಧಿಕಾರಿಗಳು, “ವಿದ್ಯಾರ್ಥಿನಿಯ ಭವಿಷ್ಯದ ದೃಷ್ಟಿಯಿಂದ ಸಹಕರಿಸಿದ ಕಲ್ಪತರು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಗೆ ನಮ್ಮ ಟ್ರಸ್ಟ್ ಪರವಾಗಿ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ” ಎಂದು ತೇಜ DS ರವರು ತಿಳಿಸಿದರು.
ವರದಿ: ದೇವರಾಜ್ ಚಿಕ್ಕನಾಯಕನಹಳ್ಳಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.