Document

Bangalore: ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ ಕಾಂಗ್ರೆಸ್ ಪ್ಲಾನ್..!

Janataa24 NEWS DESK

Bangalore: ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ– ಕಾಂಗ್ರೆಸ್ ಪ್ಲಾನ್..!

ಕಾಂಗ್ರೆಸ್ ತೆಕ್ಕೆಗೆ ಸದಾನಂದ ಗೌಡ? ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ?
ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಡಿವಿ ಸದಾನಂದಗೌಡ

ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರಿ(Mysore)ನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಸಕ್ರಿಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿವಿ ಸದಾನಂದಗೌಡ(D V Sadanandagowda) ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.

ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ. ಡಿವಿ ಸದಾನಂದಗೌಡ ಅವರ ನಡೆ ಕಾದು ನೋಡಬೇಕಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube
https://youtube.com/@janataa24?si=XsFcych2GMH0O6Gv

Tumkur: ಜೆಸಿ ಮಧುಸ್ವಾಮಿ ಕಾಂಗ್ರೆಸ್ ಸೇರ್ಪಡೆಯ ಸಾಧ್ಯತೆ- ಉಸ್ತುವಾರಿ ಸಚಿವರ ಜೊತೆ ಮಾತುಕತೆ.

Document

Leave a Reply

Your email address will not be published. Required fields are marked *