Document

JDS Karnataka : ಮೈತ್ರಿ ನಡುವೆ ಯಾವೆಲ್ಲ ಲೋಕ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವರ್ಧಿಸುತ್ತಿದೆ ಗೊತ್ತಾ..?

Janataa24 NEWS DESK

JDS Karnataka : ಮೈತ್ರಿ ನಡುವೆ ಯಾವೆಲ್ಲ ಲೋಕ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವರ್ಧಿಸುತ್ತಿದೆ ಗೊತ್ತಾ..?

JDS Karnataka Sumalatha
HD Kumaraswamy With BY Vijayendra

ಬೆಂಗಳೂರು : ಮೈತ್ರಿ ಚುನಾವಣೆ ಕ್ಷೇತ್ರವಾರು ಪಕ್ಷದ ಟಿಕೆಟ್ ಘೋಷಣೆಯಾಗಿದೆ ಕೊನೆಗೂ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವೆಲ್ಲ ಕ್ಷೇತ್ರಗಳು ದೊರೆಯಲಿವೆ ಎಂಬುದನ್ನು ಬಿಜೆಪಿ ಅಂತಿಮಗೊಳಿಸಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಬಹಿರಂಗಪಡಿಸಿದ್ದಾರೆ. ಆದರೆ, ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿರುವುದರಿಂದ ಸಂಸದ ಸುಮಲತಾ (Sumalatha)ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಮಾಡುವ ಬಿಜೆಪಿ ಸಮಾವೇಶಕ್ಕೆ ಆಯಾ ಪ್ರದೇಶದ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಟಿಕೆಟ್ ಹಂಚಿಕೆ ವೇಳೆಯೂ ಜೆಡಿಎಸ್ ಜತೆ ಸಮಾಲೋಚನೆ ನಡೆಸುತ್ತಿಲ್ಲ ಎಂದು ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಿಟ್ಟಿಗೆ ಇದೀಗ ಮದ್ದರೆಯಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಬಹಿರಂಗವಾಗಿಯೇ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್‌ ಬಿಟ್ಟುಕೊಟ್ಟಿರುವುದಾಗಿ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಕೆಲಸ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ರಾಧಾ ಮೋಹನ್ ದಾಸ್ ಕರೆ ನೀಡಿದ್ದಾರೆ. ಅಲ್ಲಿಗೆ, ಬಿಜೆಪಿ ಜೆಡಿಎಸ್ ನಡುವಿನ ಸೀಟು ಹಂಚಿಕೆ ಗುದ್ದಾಟಕ್ಕೆ ತೆರೆಬಿದ್ದಂತಾಗಿದೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡರು ಸಹ ದೆಹಲಿಗೆ ತೆರಳಿದ್ದು ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಲಿದ್ದಾರೆ. ಆದರೆ, ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ಸುಮಲತಾ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಮಂಡ್ಯ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮ ಆಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಅಮಿತ್ ಶಾ ಭೇಟಿ ಬಳಿಕ ಸುಮಲತಾ ಹೇಳಿದ್ದರು. ಪ್ರಧಾನಿ ಮೋದಿಯವರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಹ ಹೇಳಿದ್ದರು. ಆದರೆ, ಇತ್ತ ರಾಧಾ ಮೋಹನ್ ದಾಸ್ ಮಂಡ್ಯ ಅಖಾಡವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕುಮಾರಸ್ವಾಮಿಯವರೇ ಕಣಕ್ಕಿಳಿಯುವ ಸಾಧ್ಯತೆಯೂ ಇದೆ. ಆದರೆ, ಬಿಜೆಪಿ ನಿರ್ಧಾರದ ಬಳಿಕ ತೀರ್ಮಾನ ಮಾಡುವುದಾಗಿ ಹೇಳಿದ್ದ ಸುಮಲತಾ ಈಗೇನು ಮಾಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಸುಮಲತಾ ಟಿಕೆಟ್‌ ಬಗ್ಗೆ ಪ್ರತಿಕ್ರಿಯಿಸಿರೋ ರಾಧಾ ಮೋಹನ್ ದಾಸ್, ಸುಮಲತಾ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದಷ್ಟೇ ಹೇಳಿದ್ದಾರೆ.

https://www.janataa24.com/love-story-an-inter-district-love-story-ends-in-trag/

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Tumkur: ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪೂರ್ವಭಾವಿ ಸಭೆ.

Document

Leave a Reply

Your email address will not be published. Required fields are marked *