JANATAA24 NEWS DESK
Gubbi: ಜ.30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆಯ ಶತಮಾನೋತ್ಸವ ಆಚರಣೆ.

ಗುಬ್ಬಿ : ತಾಲೂಕಿನ ತ್ಯಾಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜನವರಿ 30 ರಂದು ನೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗದ ಮಾಜಿ ಸದಸ್ಯ ಯೋಗಾನಂದ ಕುಮಾರ್ ತಿಳಿಸಿದರು.
ತಾಲೂಕಿನ ತ್ಯಾಗಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ತ್ಯಾಗಟೂರು ಸರ್ಕಾರಿ ಶಾಲೆ ನೂರು ದಿನದ ಸಂಭ್ರಮಾಚರಣೆಯನ್ನು ಮಾಡಲಾಗಿದೆ. ಶತಮಾನೋತ್ಸವಕ್ಕೆ ಕಾರ್ಯಕ್ರಮಕ್ಕೆ ತುಮಕೂರು ರಾಮಕೃಷ್ಣ ಮಠದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಹಿಸಲಿದ್ದು, ಅಧ್ಯಕ್ಷತೆಯನ್ನು ತೆಂಗು ನಾರು ಮಹಾಮಂಡಳಿಯ ನಿಕಟಪೂರ್ವ ಅಧ್ಯಕ್ಷ ಟಿಎಸ್ ಕಿಡಿಗಣ್ಣಪ್ಪ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ತುಮಕೂರು ಉಸ್ತುವಾರಿ ಸಚಿವ ಜಿ ಪರಮೇಶ್ವರ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್ ಆರ್ ಶ್ರೀನಿವಾಸ್ ವಹಿಸಲಿದ್ದಾರೆ ಎಂದು ತಿಳಿಸಿದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.