Document

Gubbi: ನಾವು ಬೆಳೆದ ಬೆಳೆಗಗಳಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಬಹು ಮುಖ್ಯ–ಲೊಕೇಶ್ 

JANATAA24 NEWS DESK

 

 

Gubbi: ನಾವು ಬೆಳೆದ ಬೆಳೆಗಗಳಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಬಹು ಮುಖ್ಯ–ಲೊಕೇಶ್.Gubbi: ನಾವು ಬೆಳೆದ ಬೆಳೆಗಗಳಿಗೆ ಸಮಗ್ರ ಪೋಷಕಾಂಶ ನಿರ್ವಹಣೆ ಬಹು ಮುಖ್ಯ–ಲೊಕೇಶ್ 

 

ಗುಬ್ಬಿ: ರೈತರು ತಾವು ಬೆಳೆದ ಬೆಳೆಗಳಿಗೆ ಸಮಗ್ರ ಪೋಷಕಾಂಶ ಮತ್ತು ಸಮಗ್ರ ಕೀಟ ನಿರ್ವಹಣೆ ಮಾಡಿದರೆ ಅಧಿಕ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಡಿ.ಲೋಕೇಶ ತಿಳಿಸಿದರು.

 

ತಾಲ್ಲೂಕಿನ ಕಡಬ ಗ್ರಾಮದ ಸಮುದಾಯ ಭವನದಲ್ಲಿ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ ಪೋಷಕಾಂಶ ಮತ್ತು ಸಮಗ್ರ ಕೀಟ ನಿರ್ವಹಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ತಮ್ಮ ಜಮೀನಿನ ಮಣ್ಣನ್ನು ಎರಡು ವರ್ಷಕ್ಕೆ ಒಮ್ಮೆ ಪರೀಕ್ಷೆ ಮಾಡಿಸಿ, ಇದರ ಆಧಾರದಲ್ಲಿ ಪ್ರಧಾನ, ಲಘು ಹಾಗೂ ಸೂಕ್ಷ್ಮ ಪೋಷಕಾಂಶ ಯಾವ ಪ್ರಮಾಣದಲ್ಲಿ ಅಗತ್ಯವಿದೆ ಎಂಬುದನ್ನು ವಿಜ್ಞಾನಿಗಳ ಸಲಹೆಯಂತೆ ಗೊಬ್ಬರಗಳನ್ನು ಹಾಕಿದರೆ ಅಧಿಕ ಇಳುವರಿಯನ್ನು ಪಡೆಯಬಹುದು.

 

 

ಪ್ರಗತಿಪರ ರೈತ ಕನ್ನಡ ತಾಲ್ಲೂಕು ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಶಿವಲಿಂಗಯ್ಯ ಮಾತನಾಡಿ, ಯುವ ರೈತರು ದುಶ್ಚಟಗಳಿಗೆ ಬಲಿಯಾಗದೆ ಸಾವಯವ ಕೃಷಿ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಾವುಗಳು ಹಿಂದಿನ ಪದ್ದತಿಗಳನ್ನು ಅಳವಡಿಸಿಕೊಂಡು ಆಹಾರಗಳನ್ನು ಉತ್ಪಾದನೆ ಮಾಡಿ ಸೇವನೆ ಮಾಡಿದಾಗ ಮಾತ್ರ ಆರೋಗ್ಯದ ಮೇಲೆ ಖರ್ಚು ಮಾಡುವ ಹಣವನ್ನು ಉಳಿಸಬಹುದು ಎಂದು ತಿಳಿಸಿದರು.

 

ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ಅಧಿಕಾರಿ ಹರೀಶ್ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

 

ಕಾರ್ಯಕ್ರಮದಲ್ಲಿ ಎನ್ ಆರ್ ಎಲ್, ಐ ಎಫ್ ಸಿ ಸಿಂಧೂ, ಕೃಷಿ ಸಖಿಯರಾದ ಜಾನಕಿ, ಲಕ್ಷ್ಮೀ, ನೇತ್ರಾವತಿ, ವೀಣಾ, ಪಶುಸಖಿಯರಾದ ಪುಷ್ಪಲತ, ನಾಗಮಣಿ, ಶ್ವೇತ,ಪ್ರಗತಿಪರ ರೈತರು, ಒಕ್ಕೂಟದ ಸದಸ್ಯರು ಇತರರು ಇದ್ದರು.

 

ವರದಿ :ಶ್ರೀಕಾಂತ್ ಗುಬ್ಬಿ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.


Document

Leave a Reply

Your email address will not be published. Required fields are marked *