JANATAA24 NEWS DESK
Gubbi: ರೋಗ ಮತ್ತು ಕೀಟಗಳನ್ನು ನಿಯಂತ್ರಿಸಿ ಉತ್ತಮ ಇಳುವರಿ ಪಡೆಯಿರಿ.

ಗುಬ್ಬಿ : ರೋಗ ಮತ್ತು ಕೀಟಗಳನ್ನು ನಿಯಂತ್ರಣ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ಅಪೆಡಾ ವಲಯ ಸಹಾಯಕ ವ್ಯವಸ್ಥಾಪಕ ಯು.ಧರ್ಮರಾವ್ ತಿಳಿಸಿದರು.
ತಾಲ್ಲೂಕಿ ಸಿ.ಎಸ್ ಪುರ ಹೋಬಳಿಯ ನೆಟ್ಟೇಕೆರೆ ಗ್ರಾಮದಲ್ಲಿ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (ಅಪೆಡಾ) ಮತ್ತು ತೋಟಗಾರಿಕೆ ಇಲಾಖೆ ತುಮಕೂರು ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ ಅಡಿಕೆ ಬೆಳೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಹಾಗೂ ಅಡಿಕೆ ಉತ್ಪನ್ನಗಳ ರಫ್ತು ಅವಕಾಶ ಕರಿತು ಕಾರ್ಯಾಗಾರದಲ್ಲಿ ಮಾತನಾಡಿ,
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಸುಮಾರು 22 ಸಾವಿರಕ್ಕೂ ಅಧಿಕ ಹೆಕ್ಟೇರ್ ಅಡಿಕೆ ಬೆಳೆ ಬೆಳೆಯುತ್ತಿರುವ ರೈತರು ಇರುವುದರಿಂದ ಗುಬ್ಬಿಯಲ್ಲಿ ಈ ಕಾರ್ಯಗಾರ ಮಾಡಲಾಗುತ್ತಿದೆ.
ಜಾಗತೀಕರಣ ಯುಗದಲ್ಲಿ ಉತ್ತಮ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಉತ್ಪನ್ನಗಳನ್ನು ಬೆಳೆಯಬೇಕು. ಅಡಿಕೆಯಲ್ಲಿ ಮೌಲ್ಯವರ್ಧನೆ ಮಾಡುವ ಮೂಲಕ ಅಡಿಕೆ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದು. ಅಡಿಕೆಯನ್ನು ಬಣ್ಣಕ್ಕೆ, ಟೀಗೆ, ಪ್ಲೇಟ್ ಮಾಡಲು, ಗೊಬ್ಬರ ಮಾಡಲು ಮುಂತಾದ ಉತ್ಪನ್ನಗಳಿಗೆ ಅಡಿಕೆಯನ್ನು ಬಳಸಲಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಅಡಿಕೆ ಉತ್ಪನ್ನಗಳನ್ನು ರಫ್ತು ಮಾಡುವ ಜೊತೆಗೆ ಹಲವಾರು ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ ಎಂದು ತಿಳಿಸಿದರು.
ಪ್ರಗತಿಪರ ಚಿಂತಕ ಕುಂದರನಹಳ್ಳಿ ರಮೇಶ್ ಮಾತನಾಡಿ, ಗೋರಕ್ ವರದಿಯ ಪ್ರಕಾರ ತುಮಕೂರು ಜಿಲ್ಲೆಯಲ್ಲಿ ಅಂತರ್ಜಲ ಕಡಿಮೆ ಯಾಗುವುದರಿಂದ ಈ ಭಾಗದಲ್ಲಿ ಅಡಿಕೆ ಬೆಳೆಯನ್ನು ಬೆಸುವುದನ್ನು ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದ್ದರಿಂದ ನೀವು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು ಎಂದಯ ಹೇಳಿದರು.
ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಶಾರದಮ್ಮ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಅನೇಕ ಸಬ್ಸಿಡಿಯ ಸೌಲಭ್ಯಗಳಿದ್ದು ಅವುಗಳನ್ನು ರೈತರು ಸಮರ್ಪಕವಾಗಿ ಬಳಸಿಕೊಳ್ಳಬಹುದು ಅಡಿಕೆಯನ್ನು ಹೊರತುಪಡಿಸಿ ತೋಟಗಾರಿಕೆ ಬೆಳೆಗಳಿಗೆ ಡ್ರಿಪ್ ಅಳವಡಿಸಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತಿದೆ ಎಂದರು.
ಕಾರ್ಯಗಾರದಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗಾನಂದ್, ವಿಜ್ಞಾನಿ ಡಾ.ದರ್ಶನ್, ತೋಟಗಾರಿಕಾ ಹಿರಿಯ ತೋಟಗಾರಿಕೆ ಅಧಿಕಾರಿ ಪುಷ್ಪಲತಾ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ, ಅಪೆಡಾದ ಡಾ.ಬಿ.ಕೆ.ಪೂಜಾ, ಬಿ.ಕಾರಂತ್, ನಿವೃತ್ತ ಐಎಎಸ್ ಅಧಿಕಾರಿ ಡಾ.ಎನ್ ಎಸ್.ಚನ್ನೇಗೌಡ, ನಿವೃತ್ತ ಕೃಷಿ ವಿಸ್ತಾರಣಾಧಿಕಾರಿ ಡಾ.ಎನ್.ಎಸ್.ಶಿವಲಿಂಗೇಗೌಡ, ಕೃಷಿಕ ಸಮಾಜದ ಅಧ್ಯಕ್ಷ ಸದಾಶಿವಯ್ಯ, ಗ್ರಾಮ ಪಂಚಾಯತಿ ಅಧ್ಯಕ್ಷೆ ಎಂ.ಎಸ್.ಮೀನಾಕ್ಷಿ, ಜಗದೀಶ್ ಪಾಟಿಲ್ ಇಲಾಖೆಯ ಸಿಬ್ಬಂದಿಗಳು ಪ್ರಗತಿಪರ ರೈತರುಹಾಗೂ ಇತರರು ಇದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.