JANATAA24 NEWS DESK
Gubbi: ಸರ್ಕಾರವು ವಿಕಲಚೇತನರನ್ನು ನಿರ್ಲಕ್ಷಿಸುತ್ತಿದೆ-ರೈತ ಮುಖಂಡ ಲೊಕೇಶ್ .

ಗುಬ್ಬಿ: ಸರ್ಕಾರವು ವಿಕಲಚೇತನವುಳ್ಳ ವ್ಯಕ್ತಿಗಳನ್ನು ನಿರ್ಲಕ್ಷಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಹೇಳಿದರು.
ತಾಲ್ಲೂಕಿನ ಕಸಬ ಹೋಬಳಿ ಕೊಡಿತೋಟದಲ್ಲಿ ಅಕ್ಕಯಮ್ಮ ಮನೆಯಲ್ಲಿ ಶಿಕ್ಷಕ ರವಿಕುಮಾರ್ ಏರ್ಪಡಿಸಿದ್ದ ರಾಷ್ತ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಂಗವಿಕಲರಿಗೆ ಸರಿಯಾದ ರೀತಿಯಲ್ಲಿ ಸೌಲಭ್ಯ ನೀಡದೆ ಅವರನ್ನು ಕೀಳು ದೃಷ್ಟಿಯಲ್ಲಿ ನೋಡುತ್ತಿದ್ದಾರೆ.
ರವಿಕುಮಾರ್ ಎಂಬ ಅಂಗವಿಕಲ ವ್ಯಕ್ತಿ ಹಿಂದಿನ ವರ್ಷ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು . ಪ್ರಸ್ತುತ ವರ್ಷ ತಾಲೂಕಿನಲ್ಲಿ ಸುಮಾರು ಅತಿಥಿ ಶಿಕ್ಷಕರನ್ನು ತೆಗೆದುಕೊಂಡಿದ್ದಾರೆ. ಅದರಲ್ಲಿ ಅಂಗವಿಕಲ ವ್ಯಕ್ತಿ ಒಬ್ಬರು ಇದ್ದರು. ಅವರನ್ನು ಅತಿಥಿ ಶಿಕ್ಷಕರಾಗಿ ತೆಗೆದುಕೊಳ್ಳದೆ ಶಿಕ್ಷಣ ಇಲಾಖೆ ವಿಕಲಚೇತನರ ಬಗ್ಗೆ ನಿರ್ಲಕ್ಷತೆ ತೋರಿದೆ. ತಾಲ್ಲೂಕಿನಲ್ಲಿ ಕೆಲವು ಕಚೇರಿಗಳಲ್ಲಿ ಮತ್ತು ಇಲಾಖೆಗಳಲ್ಲಿ ವಿಕಲಚೇತನರನ್ನು ನಿರ್ಲಕ್ಷಿಸುತ್ತಿದ್ದಾರೆ.
ಮುಂದಿನ ದಿನದಲ್ಲಿ ಅತಿಥಿ ಶಿಕ್ಷಕರಾಗಿ ವಿಕಲಚೇತನ ವ್ಯಕ್ತಿಗಳನ್ನು ತೆಗೆದುಕೊಳ್ಳದಿದ್ದರೆ ಪೋಷಕರು ಬಿಇಓ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ. ಯುವಜನತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನದ ಬಳಕೆಯನ್ನು ಉತ್ತೇಜಿಸುವುದು ವಸ್ತು ಪ್ರದರ್ಶನದ ಉದ್ದೇಶ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗಂಗರೇವಣ್ಣ, ಸತ್ತಿಗಪ್ಪ, ಚಂದ್ರಶೇಖರ್, ವಾಸು, ಪೋಷಕರಾದ ಸಿದ್ದಲಿಂಗಪ್ಪ, ಗಿರೀಶ್,ಭರತ್, ಮಾರುತಿ, ಅಕ್ಕಯ್ಯಮ್ಮ, ಹನುಮಂತರಾಯಪ್ಪ, ಪೋಷಕರು, ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.