Document

Gubbi: ಅದ್ದೂರಿಯಾಗಿ ನಡೆದ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ

JANATAA24 NEWS DESK 

 

Gubbi: ಅದ್ದೂರಿಯಾಗಿ ನಡೆದ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ.

Gubbi: Hanuman Jayanti, Kannada Rajyotsava and Laksha Deepotsava celebrated with grandeur

ಗುಬ್ಬಿ:  ತಾಲ್ಲೂಕಿನ ಸಿ ಎಸ್ ಪುರ ಹೋಬಳಿಯ ಮಣಿಕುಪ್ಪೆ ಗ್ರಾಮದಲ್ಲಿ ಹನುಮ ಜಯಂತಿ, ಕನ್ನಡ ರಾಜ್ಯೋತ್ಸವ ಹಾಗೂ ಲಕ್ಷ ದೀಪೋತ್ಸವ ಮಂಗಳವಾರ ರಾತ್ರಿ ಅದ್ದೂರಿಯಾಗಿ ನಡೆಯಿತು. ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ಗ್ರಾಮಸ್ಥರು ಲಕ್ಷ ದೀಪೋತ್ಸವವನ್ನು ಬೆಳಗಿಸಿದರು. ಹನುಮ ಜಯಂತಿಯ ಅಂಗವಾಗಿ ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀ ಆಂಜನೇಯಸ್ವಾಮಿಯ ಉತ್ಸವ ಮೆರವಣಿಗೆ ಊರಿನ ಪ್ರಮುಖ ರಾಜಬೀದಿಗಳಲ್ಲಿ ನಡೆಯಿತು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

 

ಶ್ರೀ ನರಸಿಂಹ ಆಂಜನೇಯ ಸ್ವಾಮಿಯ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಕಳೆದ 25 ವರ್ಷಗಳಿಂದ ಹನುಮ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಲಕ್ಷದೀಪೋತ್ಸವವನ್ನು ಆಚರಿಸುತ್ತಾ ಬರುತ್ತಿದ್ದೇವೆ. ವರ್ಷದ 350 ದಿನದಲ್ಲಿ 250 ದಿನ ರಾಜಬೀದಿಗಳಲ್ಲಿ ಹನುಮನ ಮೆರವಣಿಗೆ ನಡೆಯುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಭಕ್ತಾದಿಗಳು ಈ ದೇವಾಲಯಕ್ಕೆ ಆಗಮಿಸುತ್ತಾರೆ ಎಂದು ತಿಳಿಸಿದರು.

 

ಕನ್ನಡ ಯುವಕರ ಸಂಘದ ಅಧ್ಯಕ್ಷ ಚಂದ್ರು ಮಾತನಾಡಿ ಪ್ರತಿ ವರ್ಷವೂ ನಾವು ಆಚರಿಸುವ ಲಕ್ಷ ದೀಪೋತ್ಸವದಲ್ಲಿ ಕನ್ನಡ ರಾಜ್ಯೋತ್ಸವ ಡಿಂಡಿಮ ಬೆಳಗುತ್ತದೆ. ಕನ್ನಡಿಗರು ಮಾತೃಭಾಷೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದರು.

 

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ನಾರಯಣ್,ವಾಸು, ಬಸವರಾಜು, ರಘು, ರಾಜು, ಕುಮಾರ್, ಶ್ರೀಕಂಠಮೂರ್ತಿ, ತಿಮ್ಮೆಗೌಡ, ಕೃಷ್ಣೋಜಿರಾವ್ ಸೇರಿದಂತೆ ಇತರರು ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

 

ವರದಿ :ಶ್ರೀಕಾಂತ್ ಗುಬ್ಬಿ.


ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *