JANATAA24 NEWS DESK
Gubbi: ಓಬವ್ವನ ಸಮಯಪ್ರಜ್ಞೆ ಧೈರ್ಯ, ಸಾಹಸ,ಹೆಣ್ಣು ಮಕ್ಕಳಿಗೆ ಸ್ಪೂರ್ತಿದಾಯಕವಾಗಬೇಕು.

ಗುಬ್ಬಿ: ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಗ್ರೇಡ್ 02 ತಹಶೀಲ್ದಾರ್ ಶಶಿಕಲಾ ಬಿ.ಎಂ ಕರೆ ನೀಡಿದರು.
ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು ಒರ್ವ ಕೋಟೆ ಕಾವಲುಗಾರನ ಹೆಂಡತಿಯಾಗಿ, ಕೋಟೆಗೆ ಆಪತ್ತು ಎದುರಾದಾಗ ಸಮಯಪ್ರಜ್ಞೆಯಿಂದ ವೈರಿಗಳ ರುಂಡ ಚಂಡಾಡಿದ ವೀರ ವನಿತೆ ಓಬವ್ವ ಎಲ್ಲರಿಗೂ ಮಾದರಿಯಾಗಬೇಕು. ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ಉತ್ತಮ ಪ್ರಗತಿ ಕಾಣಬೇಕು. ಸ್ತ್ರೀ ಸಬಲೀಕರಣದ ಶಕ್ತಿ ಒನಕೆ ಓಬವ್ವ. ಅವರ ಚರಿತ್ರೆ ತಿಳಿಯಲು ನಾವು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಕಸಾಪ ಅಧ್ಯಕ್ಷ ಯತೀಶ್ ಮಾತನಾಡಿ ಗಂಡಿನ ಪ್ರತಿ ಸಾಧನೆಯ ಹಿಂದೆ ಹೆಣ್ಣಿನ ಶಕ್ತಿ ಇರುತ್ತದೆ ಎಂಬುವುದಕ್ಕೆ ಉದಾಹರಣೆ ಒನಕೆ ಓಬವ್ವ. ಒನಕೆ
ಯಿಂದ ಶತ್ರುಗಳನ್ನು ಸದೆ ಬಡಿದಿದ್ದರು. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು. ಮಹಿಳೆಯರು ಸ್ವಾವಲಂಬಿಗಳಾಗಬೇಕು. ಆಂತರಿಕವಾಗಿ ಬದಲಾಗಬೇಕಿದ್ದು, ಸರ್ಕಾರದ ಹಲವು ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಸರಿ ಸಮಾನವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಶಿರಸ್ತೇದಾರ್ ವರುಣ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಬಿಸಿಎಂ ಇಲಾಖೆ ಸಹಾಯಕ ನಿರ್ದೇಶಕಿ ಪವಿತ್ರಾ, ಛಲವಾದಿ ಮಹಾಸಭಾದ ಅಧ್ಯಕ್ಷ ಈರಣ್ಣ, ಗೌರವ ಅಧ್ಯಕ್ಷ ಲೋಕೇಶ್, ಮಧು, ನಾಗರಾಜ್, ಈಶ್ವರಯ್ಯ ತಾಲೂಕು ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.