Janataa24 NEWS DESK
Gubbi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಕ್ಕೆ ಬಾಜನರಾಗುವವರಿಗೆ ಅರ್ಜಿ ಆಹ್ವಾನ.

ಗುಬ್ಬಿ : ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಕ್ಕೆ ಬಾಜನರಾಗುವವರು ಅರ್ಜಿ ಸಲ್ಲಿಸಲು ಆರಂಭವಾಗಿದ್ದು ಅಕ್ಟೋಬರ್ 23 ರ ಗುರುವಾರದಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ರಾಜ್ಯೋತ್ಸವ ಆಯ್ಕೆ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್ ಇಓ ರಂಗನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಲೂಕು ಪಂಚಾಯತ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಮಿತಿಯ ಅಧ್ಯಕ್ಷರು ಹಾಗೂ ತಹಶೀಲ್ದಾರ್ ಆರತಿ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ತೀರ್ಮಾನದಂತೆ ಆಯ್ಕೆ ಸಮಿತಿಯನ್ನು ರಚಿಸಿದ್ದು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬಾಜಿನರಾಗಲು ಇಚ್ಚಿಸುವವರು ಅಕ್ಟೋಬರ್ 17 ರಿಂದ ಅಕ್ಟೋಬರ್ 23 ರವರೆಗೆ ರಜೆಯ ದಿನ ಹೊರತು ಪಡಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಣ, ಆರೋಗ್ಯ, ಸಮಾಜ ಸೇವೆ, ಕ್ರೀಡೆ, ಪತ್ರಿಕಾ ರಂಗ, ಪರಿಸರ, ರಂಗಭೂಮಿ, ಸಾಹಿತ್ಯ, ಕೃಷಿ, ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಆಸಕ್ತರು ತಾವುಗಳು ಮಾಡಿರುವ ಸಾಧನೆಯ ಮಾಹಿತಿಯೊಂದಿಗೆ ತಾಲೂಕು ಪಂಚಾಯತ್ ಕಚೇರಿಯಲ್ಲಿ ನೀಡುವ ಅರ್ಜಿಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು. ಅರ್ಜಿ ಪಡೆಯಲು ಹರ್ಷ ಹಾಗೂ ದರ್ಶನ್ ಅವರನ್ನು ನೇಮಿಸಲಾಗಿದ್ದು, ಅರ್ಜಿ ಸಲ್ಲಿಸುವವರು ತಮ್ಮ ಮೇಲೆ ಯಾವುದೇ ರೀತಿಯ ಪ್ರಕರಣಗಳು ಇರಬಾರದು, ತಾಲೂಕಿನ ಸ್ಥಳೀಯರಿಗೆ ಆದ್ಯತೆ ನೀಡಿದ್ದು, ಕಾಲಾವಕಾಶ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು, ಬಳಿಕ ಬಂದರೆ ಅರ್ಜಿಯನ್ನು ಪುರಸ್ಕರಿಸಲಾಗುವುದಿಲ್ಲ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾ.ಪಂ ಟಿಪಿಓ ಜಗನ್ನಾಥ್ ಗೌಡ, ಕೆಂಪರಾಜ್, ಕೇಸ್ ವರ್ಕರ್ ಹರೀಶ್ ಉಪಸ್ಥಿತರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.