JANATAA24 NEWS DESK
Gubbi: ದಾಸರಕಲ್ಲಹಳ್ಳಿಯಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ.

ಗುಬ್ಬಿ : ಸ್ವಾಮಿ ವಿವೇಕಾನಂದರ ವಿಚಾರಧಾರೆಯನ್ನು ಯುವ ಸಮುದಾಯ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ನಿವೃತ್ತ ಶಿಕ್ಷಕ ಬಿಸಿ ಶಿವಣ್ಣ ತಿಳಿಸಿದರು.
ತಾಲ್ಲೂಕಿನ ಕಡಬ ಹೋಬಳಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘದ ವತಿಯಿಂದ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು
ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಯಾಗಿದ್ದು ಅವರ ತತ್ವ ,ವಿಚಾರ, ಮೌಲ್ಯಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಬೇಕು.ತಂದೆ ತಾಯಿಗಳು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಅವರು ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಬಾಬಾ ಸಾಹೇಬ ಡಾ ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು. ಸಂಘಟನೆಯ ಮೂಲಕ ಹೋರಾಟ ಮಾಡಿ ಪ್ರತಿಯೊಬ್ಬರೂ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ. ಶೋಷಿತ ಸಮುದಾಯಗಳಿಗೆ ಒಳಮಿಸಲಾತಿ ದೊರೆತರೆ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಸ್ವಾಮಿ ವಿವೇಕಾನಂದ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಮಾತನಾಡಿ ಸ್ವಾಮಿ ವಿವೇಕಾನಂದ ಸಂಘ ಸ್ಥಾಪನೆಯಾಗಿ 8 ವರ್ಷಗಳು ಪೂರೈಸಿದ್ದು ಈ ಅವಧಿಯಲ್ಲಿ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿದೆ. ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘದ ಗೌರವಾಧ್ಯಕ್ಷರಾದ ಆನಂದ ಮೂರ್ತಿ,
ಅನಂತ್ ನಾರಾಯಣ, ಉಪಾಧ್ಯಕ್ಷ ನಾರಾಯಣ, ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಕಾರ್ಯದರ್ಶಿ ಸಂತೋಷ್, ಖಜಾಂಚಿ ವಿಜಯ್ ಸದಸ್ಯರಾದ ನಯನ, ಶ್ರೀನಿವಾಸ್, ಶಿವು, ಸಂತೋಷ ಡಿ ಎಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.