JANATAA24 NEWS DESK
Gubbi: ರಾಗಿ ಖರೀದಿ ಪ್ರಕ್ರಿಯೆಗೆ ತಹಶೀಲ್ದಾರ್ ಅರತಿ ಬಿ ಚಾಲನೆ.

ಗುಬ್ಬಿ : ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ತಹಶೀಲ್ದಾರ್ ಆರತಿ ಬಿ ಚಾಲನೆ ನೀಡಿದರು.
2025-26ನೇ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ಗೆ ₹4,886 ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತಿದೆ. ರೈತರು ಸ್ವತಃ ಖರೀದಿ ಕೇಂದ್ರಕ್ಕೆ ಬಂದು ಬಯೊಮೆಟ್ರಿಕ್ ನೀಡಿ ರಾಗಿ ನೀಡಬೇಕು. ತಾಲ್ಲೂಕಿನಲ್ಲಿ ಖರೀದಿಯಾದ ರಾಗಿಯನ್ನು ಸ್ಥಳೀಯ ಪಡಿತರ ವಿತರಣಾ ವ್ಯವಸ್ಥೆ ಮೂಲಕವೇ ವಿತರಿಸಲಾಗುತ್ತದೆ. ಸಾರ್ವಜನಿಕ ಉಪಯೋಗಕ್ಕೆ ಬರುವ ರಾಗಿ ಶುದ್ಧವಾಗಿರುವಂತೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ವ್ಯವಸ್ಥಾಪಕ ತನ್ವೀರ್ ಅಲಿ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನಡೆಯುತ್ತಿದೆ. ತಾಲ್ಲೂಕಿನಲ್ಲಿ 2,334 ರೈತರು ನೋಂದಣಿಯಾಗಿದ್ದು 64053.5 ಲಕ್ಷ ಕ್ವಿಂಟಲ್ ಖರೀದಿ ಮಾಡಲಾಗುವುದು. ಖರೀದಿಗೆ ಅಗತ್ಯ ಗೋಣಿಚೀಲಗಳನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ಖರೀದಿ ಕೇಂದ್ರದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ. ನೋಂದಣಿ ಮಾಡಿಕೊಂಡಿರುವ ಎಲ್ಲಾ ರೈತರ ರಾಗಿ ಖರೀದಿ ಮಾಡಲಾಗುವುದು ಎಂದ ಅವರು ಖರೀದಿ ಕೇಂದ್ರಕ್ಕೆ ರಾಗಿ ತರಲು ಫಲಾನುಭವಿಗಳಿಗೆ ದಿನಾಂಕವನ್ನು ನಿಗದಿ ಮಾಡಿದ್ದು, ಅದರಂತೆ ರಾಗಿ ಖರೀದಿ ಮಾಡಲು ಪಟ್ಟಿ ಮಾಡಿ ಬಿಡುಗಡೆ ಮಾಡಲಾಗಿರುವ ಕಾರಣ ಈ ಹಿಂದೆ ಆಗುತ್ತಿದ್ದ ಸಮಸ್ಯೆಗಳು ಉದ್ಭವ ಆಗುವುದಿಲ್ಲ ಎಂದು ತಿಳಿಸಿದರು.
ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ ಮಾತನಾಡಿ ರೈತರು ದಲ್ಲಾಳಿಗಳಿಗೆ ರಾಗಿ ಮಾರಾಟ ಮಾಡದೆ ಖರೀದಿ ಕೇಂದ್ರದಲ್ಲಿಯೇ ಬೆಂಬಲ ಬೆಲೆಗೆ ಮಾರಾಟ ಮಾಡಬೇಕು, ಈ ಹಿಂದೆಯಲ್ಲ ಸಮಸ್ಯೆಗಳು ಉದ್ಭವಿಸುತ್ತಲೇ ಬಂದಿದ್ದು, ಸಂಘವು ಹೋರಾಟ ಮಾಡುವ ಮೂಲಕವೇ ಸರ್ಕಾರದ ಗಮನ ಸೆಳೆಯಲು ಯಾವಾಗಲೂ ಆಗುವುದಿಲ್ಲ. ಸರ್ಕಾರಗಳೇ ಕಾಳಜಿ ವಹಿಸಿ ರೈತರು ಬೆಳೆಯುವ ಪ್ರತಿ ಬೆಳೆಗೂ ಬೆಂಬಲ ಬೆಲೆ ಕೇಳುವುದು ವಿಪರ್ಯಾಸದ ಸಂಗತಿ. ಕಳೆದ ಬಾರಿ ಕೊಬ್ಬರಿ ಹಾಗೂ ರಾಗಿ ಖರೀದಿ ಕೇಂದ್ರ ತೆರೆಯುವ ವೇಳೆ ಸಾಕಷ್ಟು ಸಮಸ್ಯೆಯು ಉಂಟಾಗುತ್ತಲೇ ಬಂದಿದ್ದು, ಈ ಬಾರಿಯಾದರೂ ರಾಗಿ ಖರೀದಿ ಕೇಂದ್ರಕ್ಕೆ ಮೂಲಭೂತ ಸೌಕರ್ಯ ನೀಡುವ ಜೊತೆಗೆ ವ್ಯವಸ್ಥಿತವಾಗಿ ಖರೀದಿ ಮಾಡುವ ರೈತರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ವೀಣಾ, ಸಿದ್ದೇಗೌಡರು, ಖರೀದಿ ಅಧಿಕಾರಿ
ಲತಾ ಎಚ್, ಟಿ, ಪರೀಕ್ಷಕ ಬಸವರಾಜ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಪ.ಪಂ ಮಾಜಿ ಸದಸ್ಯ ಶಿವಕುಮಾರ್, ಆನಂದಯ್ಯ, ರೈತರು ಉಪಸ್ಥಿತರಿದ್ದರು
ವರದಿ :ಶ್ರೀಕಾಂತ್ ಗುಬ್ಬಿ
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.