Janataa24 NEWS DESK
Gubbi: ಶೀಘ್ರದಲ್ಲಿ ಹಾಗಲವಾಡಿ ಕೆರೆಗೆ ಹೇಮೆ ನೀರು ಹರಿಸಲಾಗುವುದು–ಶಾಸಕ ಎಸ್ ಆರ್ ಶ್ರೀನಿವಾಸ್.

ಗುಬ್ಬಿ, : ಹಾಗಲವಾಡಿ ಕೆರೆಗೆ ಹೇಮಾವತಿ ನೀರನ್ನು ಹರಿಸಲು ಭೂ ಸ್ವಾದಿನ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಹಾಗಲವಾಡಿ ಕೆರೆಗೆ ಹೇಮೆಯನ್ನು ಹರಿಸಲಾಗುವುದು ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಹೊಸಕೆರೆ, ಎಕ್ಕಲಕಟ್ಟೆ, ಗಣೇಶಪುರ, ಗಳಿಗೆಕೆರೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು
ಈಗಾಗಲೇ ಹಾಗಲವಾಡಿ ಕೆರೆಗೆ ನೀರು ಹರಿಸಲು ಭೂಸ್ವಾದಿನ ಪ್ರಕ್ರಿಯೆ ಪೂರ್ಣಗೊಂಡಿದ್ದು ಗುತ್ತಿಗೆದಾರರು ಕಾಮಗಾರಿಯನ್ನು ವಿಳಂಬ ಮಾಡಿರುವುದರಿಂದ ಮತ್ತೊಮ್ಮೆ ಕಾಮಗಾರಿ ಪ್ರಾರಂಭಿಸಲು ಟೆಂಡರ್ ಕರೆದು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಲಾಗುವುದು. ಕೆರೆಗೆ ಹೇಮಾವತಿ ನೀರನ್ನು ಹರಿಸಿ, ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು.
ಹಾಗಲವಾಡಿ ಕೆರೆಗೆ ಹೇಮಾವತಿ ನೀರು ಹರಿಸುವುದರಿಂದ ಈ ಭಾಗದ ರೈತರ ಜೀವನ ಮಟ್ಟ ಹಾಗೂ ಆರ್ಥಿಕ ಮಟ್ಟ ಸುಧಾರಿಸುತ್ತದೆ ಎಂದ ಅವರು ಇನ್ನೂ ಮಾನ್ಯ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಅವರು ಚಪ್ಪಲಿ ಎಸೆದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಹಾಗೂ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪಿಡಿಓ ತಿಪ್ಪೇಸ್ವಾಮಿ, ರಾಜೇಂದ್ರ ಪ್ರಸಾದ್ ಮುಖಂಡರಾದ ಗುರು ರೇಣುಕಾರಧ್ಯ, ಸಣ್ಣ ರಂಗಯ್ಯ, ಗ್ರಾಮ ಪಂಚಾಯತಿ ಅಧ್ಯಕ್ಷ ರೇಣುಕಯ್ಯ, ಸದಸ್ಯರಾದ ದಯಾನಂದ್, ಕಮಲಮ್ಮ, ದಕ್ಷಿಣ ಮೂರ್ತಿ, ರಾಜು, ಗುತ್ತಿಗೆದಾರ ಶಿವಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.