Janataa24 NEWS DESK
Gubbi:ಜಿ.ಪಂ.ಹಾಗೂ ತಾ.ಪಂ.ಚುನಾವಣೆ ಶೀಘ್ರ–ಶಾಸಕ ಎಸ್ ಆರ್ ಶ್ರೀನಿವಾಸ್.

ಗುಬ್ಬಿ: ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳು ಶೀಘ್ರವಾಗಿ ನಡೆಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಕೊಂಡ್ಲಿ ಕ್ರಾಸ್ ನಿಂದ ಬ್ಯಾಟಪ್ಪನ ಪಾಳ್ಯದವರೆಗೆ 15 ಕೋಟಿ ರೂಗಳ ವೆಚ್ಚದ ಸಿ ಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದವರು ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಶೀಘ್ರವಾಗಿ ನಡೆಸಲು ತೀರ್ಮಾನಿಸಿದೆ ಇನ್ನು ಕೊಂಡ್ಲಿ, ದೊಡ್ಡಗುಣಿ, ಮಠ ಗಂಗಯ್ಯನ ಪಾಳ್ಯ, ಕೆರೆಗಳಿಗೆ ಹೇಮಾವತಿ ನೀರನ್ನು ಲಿಫ್ಟ್ ಇರ್ರೀಗೇಷನ್ ಮಾಡಲಾಗುತ್ತಿದ್ದು ಕುಡಿಯುವ ನೀರಿಗೆ ಹಾಗೂ ಅಂತರ್ಜಲ ಮಟ್ಟ ವೃದ್ಧಿಯಾಗಿ ಈ ಭಾಗದ ರೈತರಿಗೆ ತುಂಬಾ ಅನುಕೂಲಕರವಾಗಲಿದೆ ಇನ್ನು ಈ ಭಾಗದ ಅಭಿವೃದ್ಧಿಗಾಗಿ150 ಕೋಟಿ ರೂಗಳ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ,ಎನ್,ಬೆಟ್ಟಸ್ವಾಮಿ ಜಗನ್ನಾಥ್, ಪಾಪಣ್ಣ ಕೊಂಡ್ಲಿ ಪಿಡಿಒ ರಂಗನಾಥ್ ದೊಡ್ಡ ಗುಣಿ ಪಿಡಿಓ ರಂಗರಾಜು, ಗ್ರಾ,ಪಂ ಅಧ್ಯಕ್ಷ ನರಸಿಂಹಮೂರ್ತಿ,
ಮುಖಂಡರಾದ ಶಶಿಧರ್, ಕುಂದರನಹಳ್ಳಿ ಸಿದ್ದಲಿಂಗಯ್ಯ, ಪಣೀಂದ್ರ ಮುನಿ, ಯೋಗೇಶ್,ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.