JANATAA24 NEWS DESK
Hassan: ಹಾಸನದಲ್ಲಿ ಘೋರ ದುರಂತ– ಪಾಠ ಮಾಡುತ್ತಿರುವಾಗಲೇ ಶಿಕ್ಷಕರಿಗೆ ಹೃದಯಾಘಾತ💔.

ಹಾಸನ: ವಿದ್ಯಾರ್ಥಿಗಳಿಗೆ (Students) ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ (Heart Attack) ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು (Teacher) ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ಕೂಡಲೇ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.
ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.