Janataa24 NEWS DESK
Hassan:ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬ*ಲಿ.

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಕಾಡಾನೆ-ಮಾನವನ ನಡುವಿನ ಸಂಘರ್ಷಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕಾಡಾನೆ ದಾಳಿಗೆ ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಶುಕ್ರವಾರ ಬೆಳಗ್ಗೆ ಬಂದಿದ್ದ ಮಹಿಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿದೆ.
ಅದಕ್ಕೂ ಮುನ್ನ ನಿನ್ನೆ ಬೆಳಗ್ಗೆ ಸಕಲೇಶಪುರ ತಾಲೂಕಿನ ಕೆರೋಡಿ ಗ್ರಾಮದಲ್ಲಿನ ಮನೆಯ ಬಳಿ ದೈತ್ಯಾಕಾರದ ಕಾಡಾನೆ ಸಾಗಿತ್ತು. ಇದನ್ನು ನೋಡಿ ವಯೊವೃದ್ಧೆ ಪಾರ್ವತಿ ಎಂಬ ಮಹಿಳೆ ಮನೆಯೊಳಗೆ ಹೋಗಿದ್ದರು. ನಂತರ ರಸ್ತೆಯಲ್ಲಿ ಎದುರಾದ ಒಂಟಿಸಲಗವನ್ನು ಕಂಡು ಕಾರ್ಮಿಕರು ಓಡಿ ಹೋಗಿದ್ದರು.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಮೇಲೆತ್ತಲು ಬಿಡದೆ ಸ್ಥಳೀಯರು ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆ ದಾಳಿಯಿಂದ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಕಳೆದ 5 ತಿಂಗಳಲ್ಲಿ 6 ಮಂದಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಅರಣ್ಯ ಸಚಿವರು ಕೇವಲ ಭರವಸೆ ನೀಡುತ್ತಿದ್ದಾರೆ. ಹೊರತು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ಯಾವುದೇ ಅಹಿತರಕ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು. ಬಳಿಕ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ, ಸಿಸಿಎಫ್ ಏಡುಕುಂಡಲ, ಡಿಎಫ್ಓ ಸೌರಭ್ ಕುಮಾರ್ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು ಅಲ್ಲದೇ ಸ್ಥಳಕ್ಕೆ ಅರಣ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಬೇಕು ಅಲ್ಲಿಯವರೆಗೂ ಮೃತದೇಹ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಕಾಡಾನೆ ಪೀಡಿತ ಪ್ರದೇಶದ ಜನರು ಕಾಡಾನೆಗಳಿಂದ ಪ್ರತಿನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ತೆರೆದಿಟ್ಟರು. ಇದರಿಂದ ಸಿಟ್ಟಾದ ಜಿಲ್ಲಾಧಿಕಾರಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ತರಾಟೆಗೆ ತೆಗದುಕೊಂಡರು. ಈಗಿನಿಂದಲೇ ಕಾಡಾನೆ ಚಲನವಲನದ ಬಗ್ಗೆ ಸರಿಯಾದ ಮಾಹಿತಿ ನೀಡಿ, ಕಾಡಾನೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತೇವೆ. ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡದಂತೆ ಚೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ. ಕಾಡಾನೆ ಹಾವಳಿ ತಪ್ಪಿಸಲು ಸಾಕಷ್ಟು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿ ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿ ಮಾತನಾಡಿದ ಅಧಿಕಾರಿಗಳು ಹಲವು ಭರವಸೆಗಳನ್ನು ನೀಡಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.