Document

Hosadurga: ನಾಯಿಗೆರೆ ಬೂತ್ ಮಟ್ಟದಿಂದ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಜಗದೀಶ್ ರಾಮಯ್ಯ ಆಯ್ಕೆ.

Kn rajanna Madhugiri MLA janataa24.comK kumar Balaji Seva Trust Janataa24.comTuruvekere ex mla masala jayaram janataa24

JANATAA24 NEWS DESK 

 

 

Hosadurga: ನಾಯಿಗೆರೆ ಬೂತ್ ಮಟ್ಟದಿಂದ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಜಗದೀಶ್ ರಾಮಯ್ಯ ಆಯ್ಕೆ.

 

ಹೊಸದುರ್ಗ : ತಾಲೂಕಿನ ಯುವ ನಾಯಕ ಕಡಿಮೆ ಅವಧಿಯಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದ ನಿಷ್ಠಾವಂತ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿರುವ ಹೊಸದುರ್ಗ ತಾಲೂಕಿನ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಯಾಗಿ ಪಕ್ಷವನ್ನು ಸದೃಢಗೊಳಿಸಲು ಪ್ರಾಮಾಣಿಕ ಕಾರ್ಯಕರ್ತನಾಗಿ ದುಡಿದು ಸೇವೆ ಸಲ್ಲಿಸಿದ. ಶ್ರೀರಾಂಪುರ ಹೋಬಳಿಯ ನಾಯಿಗೆರೆ ಗ್ರಾಮದ ಜಗದೀಶ್ ರಾಮಯ್ಯನವರಿಗೆ ಚಿತ್ರದುರ್ಗ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗೆ ಆಯ್ಕೆ ಮಾಡಿ ಜಿಲ್ಲಾಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿಯವರು ಆದೇಶ ಹೊರಡಿಸಿದ್ದಾರೆ.

ಜೊತೆಗೆ ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿತವಾಗಿ ನಿರ್ವಹಿಸುತ್ತಾ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುವಂತೆ ಸೂಚಿಸಿ ಅಭಿನಂದಿಸಿದ್ದಾರೆ. ಪತ್ರಿಕೆಯೊಂದಿಗೆ ಕಾರ್ಯದರ್ಶಿ ಜಗದೀಶ್ ರಾಮಯ್ಯರವರು ಮಾತನಾಡಿ ನನ್ನ ಪರಿಶ್ರಮವನ್ನು ಗುರುತಿಸಿ ಪಕ್ಷದ ನಾಯಕರು ನನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ನನಗೆ ಜವಾಬ್ದಾರಿ ನೀಡಿದ್ದಾರೆ. ಬೂತ್ ಮಟ್ಟದಿಂದ ತಾಲೂಕು ಮಟ್ಟದವರೆಗೂ 15 ವರ್ಷಗಳಿಂದ ಸಕ್ರಿಯವಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯ್ಲಲಿ ಶಕ್ತಿ ತುಂಬಲು ಹಗಲಿರುಳು ಶ್ರಮಿಸಿದ್ದೇನೆ.

ಹಾಗೂ ತಾಲೂಕಿನ ಹೋಬಳಿ ಕೇಂದ್ರ ಬಿಂದುವಾದ ಶ್ರೀರಾಂಪುರದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಪ್ರಾರಂಭ ಮಾಡಿ ಹಿಂದೂ ಕಾರ್ಯಕರ್ತರನ್ನು ಒಂದುಗೂಡಿಸಿ ಬಿಜೆಪಿಯನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ಕಾರಣ ನನ್ನನ್ನು ಗುರುತಿಸಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರಿಗೆ ಹೃದಯಪೂರ್ವಕ ಅಭಿನಂದಿಸಿದರು. ಹಿಂದುಳಿದ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದ ನಮ್ಮ ಗುರಿ. ಕ್ಷೇತ್ರದ ಜನತೆಗೆ ಒಳ್ಳೆಯದು ಮಾಡಬೇಕು ಎಂಬ ಸಂಕಲ್ಪದೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.

ನನಗೆ ಅವಕಾಶ ಕಲ್ಪಿಸಿಕೊಟ್ಟಂತ ಪಕ್ಷದ ನಾಯಕರನ್ನು ಮತ್ತೊಮ್ಮೆ ಅಭಿನಂದಸುತ್ತೇನೆ. ಪಕ್ಷಕ್ಕಾಗಿ ದುಡಿಯುವ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು. ಹಿಂದೆ ಹೊಸದುರ್ಗ ತಾಲೂಕಿನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಅನುಭವವಿದ್ದು ಇದೀಗ ನೂತನ ಜಿಲ್ಲಾ ಕಾರ್ಯದರ್ಶಿ ಸ್ಥಾನ ಮಾನ ಹೊಸದುರ್ಗ ಕ್ಷೇತ್ರದ ಜಗದೀಶ್ ರಾಮಯ್ಯನವರಿಗೆ ಸಿಕ್ಕಿರುವುದು ತುಂಬಾ ಖುಷಿ ವಿಚಾರವಾಗಿದೆ ಪ್ರಾಮಾಣಿಕ ಕಾರ್ಯಕರ್ತರಿಗೆ ಸಂದ ಜಯ ಎಂದು ಹೊಸದುರ್ಗ ತಾಲೂಕಿನ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.

 

ವರದಿ:ಮಂಜುನಾಥ್ ಡಿ ಶ್ರೀರಾಂಪುರ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *