Document

Karnataka: 16 ವರ್ಷದ ಮಕ್ಕಳು ಇನ್ಮುಂದೆ ಮೊಬೈಲ್ ಬಳಸುವಂತಿಲ್ಲ. 

JANATAA24 NEWS DESK 

 

Karnataka: 16 ವರ್ಷದ ಮಕ್ಕಳು ಇನ್ಮುಂದೆ ಮೊಬೈಲ್ ಬಳಸುವಂತಿಲ್ಲ.

Karnataka- 16-year-olds will no longer be able to use mobile phones.

16 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ನಿಷೇಧ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಮಾಡಲಾಗಿದೆ. ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶ ಇದೆ.

ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನ. ಕೇಂದ್ರ ಸರ್ಕಾರದ ಆರ್ಥೀಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಿ ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಬಜೆಟ್‌ನಲ್ಲಿ ಘೋಷಣೆ.

 

Karnataka: ಮೊಬೈಲ್ ಬಳಕೆಯಿಂದ ಮಕ್ಕಳ ಮೇಲಾಗುತ್ತಿರುವ ದುಷ್ಪರಿಣಾಮಗಳೇನು❓️

ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು, ಮಾನಸಿಕ ಒತ್ತಡ, ಆತ್ಮಹತ್ಯೆಯ ಭಾವನೆಗಳು, ಅಧ್ಯಯನದಲ್ಲಿ ಇಳಿಕೆ ಮತ್ತು ಸಾಮಾಜಿಕ ಸಂಬಂಧಗಳಲ್ಲಿ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಸರ್ಕಾರ ವಿವರಿಸಿದೆ. ಆಪ್ರಾಪ್ತ ಮಕ್ಕಳನ್ನು ಸೋಶಿಯಲ್ ಮೀಡಿಯಾ ದುರುಪಯೋಗದಿಂದ ರಕ್ಷಿಸಿ, ಅವರ ಆರೋಗ್ಯ, ಶಿಕ್ಷಣ ಮತ್ತು ಭವಿಷ್ಯವನ್ನು ಕಾಪಾಡುವುದು ಈ ನಿರ್ಧಾರದ ಮುಖ್ಯ ಉದ್ದೇಶವಾಗಿದೆ.

 

ಫಿನ್‌ಲ್ಯಾಂಡ್, ಬ್ರಿಟನ್ ಮತ್ತು ಆಸ್ಟ್ರೇಲಿಯಾ ದೇಶಗಳು ಈಗಾಗಲೇ ಇದೇ ರೀತಿಯ ನಿಷೇಧ ಅಥವಾ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿರುವುದು ಕರ್ನಾಟಕಕ್ಕೆ ಮಾದರಿಯಾಗಿದೆ. 2025-26ರ ಆರ್ಥಿಕ ಸಮೀಕ್ಷೆಯಲ್ಲೂ ವಯಸ್ಸಿನ ಆಧಾರಿತ ನಿರ್ಬಂಧದ ಶಿಫಾರಸು ಮಾಡಲಾಗಿತ್ತು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದರು.

 

ಸರ್ಕಾರದ ಉದ್ದೇಶ ಮತ್ತು ಜಾರಿ ಸರ್ಕಾರವು ಈ ನಿಷೇಧವನ್ನು ಕೇವಲ ಕಾನೂನು ಮೂಲಕವಲ್ಲದೆ, ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಮತ್ತು ‘ಬಿಯಾಂಡ್ ಸ್ಕ್ರೀನ್ಸ್’ ಎಂಬ ಜಾಗೃತಿ ಕಾರ್ಯಕ್ರಮಗಳ ಮೂಲಕ ಜನಪ್ರಿಯಗೊಳಿಸಲು ಯೋಜಿಸಿದೆ. ಶಾಲೆಗಳಲ್ಲಿ ಡಿಜಿಟಲ್ ಸಾಕ್ಷರತೆ, ಪೋಷಕರ ಜವಾಬ್ದಾರಿ ಮತ್ತು ಆರೋಗ್ಯ ತಜ್ಞರ ಸಲಹೆಗಳನ್ನು ಒಳಗೊಂಡಂತೆ ಸಮಗ್ರ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

 

ಈ ನಿರ್ಧಾರವು ಭಾರತದಲ್ಲೇ ಮೊದಲ ಬಾರಿಗೆ ರಾಜ್ಯ ಮಟ್ಟದಲ್ಲಿ ಜಾರಿಗೊಳ್ಳುತ್ತಿರುವುದರಿಂದ ದೇಶಾದ್ಯಂತ ಗಮನ ಸೆಳೆದಿದೆ. ಮಕ್ಕಳ ಭವಿಷ್ಯಕ್ಕಾಗಿ ಡಿಜಿಟಲ್ ಜಗತ್ತಿನಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ತರುವ ಈ ಕ್ರಮವು ಭವಿಷ್ಯದಲ್ಲಿ ಇತರ ರಾಜ್ಯಗಳಿಗೂ ಮಾದರಿಯಾಗಬಹುದು ಎಂಬ ನಿರೀಕ್ಷೆ ಇದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *