Document

KPCC : ಕೆಪಿಸಿಸಿ ಯಲ್ಲಿ ಮೇಜರ್ ಸರ್ಜರಿ, ಐದು ಜನ ಹೊಸ ಕಾರ್ಯಾಧ್ಯಕ್ಷರ ನೇಮಕ.

Janataa24 NEWS DESK

KPCC : ಕೆಪಿಸಿಸಿ ಯಲ್ಲಿ ಮೇಜರ್ ಸರ್ಜರಿ, ಐದು ಜನ ಹೊಸ ಕಾರ್ಯಾಧ್ಯಕ್ಷರ ನೇಮಕ.

KPCC AICC

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಕೊಂಚ ಲೋಕಸಭೆ ಚುನಾವಣೆಯಲ್ಲಿ ಬಿಸಿ ಮುಟ್ಟಿಸಲು ಕಾಂಗ್ರೆಸ್ ಕೆಪಿಸಿಸಿನಲ್ಲಿ ಸರ್ಜರಿ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಮುಂದಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ನಾಲ್ವರು ಕಾರ್ಯಾಧ್ಯಕ್ಷರ(Working President’s)ನ್ನು ಬದಲಾವಣೆ ಮಾಡಿ, ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಸದ್ಯದ ಇರೋ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ, ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ ಹಾಗೂ ವಸಂತ್ ಕುಮಾರ್ ಅವರನ್ನು ನೇಮಕ ಮಾಡಿ ಎಐಸಿಸಿ(AICC) ಶನಿವಾರ ಆದೇಶ ಹೊರಡಿಸಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಹಾಗೂ ಸಹ ಅಧ್ಯಕ್ಷರಾಗಿ ಎಲ್ ಹನುಮಂತಯ್ಯ(L Hanumanthaiah) ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ. ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

Central Govt : ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ದ ಸುಪ್ರೀಂಗೆ ರಿಟ್ ಅರ್ಜಿ- ಸಿದ್ದರಾಮಯ್ಯ

Document

Leave a Reply

Your email address will not be published. Required fields are marked *