Document

KSRTC: ಡೀಸೆಲ್ ದರ ಏರಿಕೆ ಆಗುವ ಸಾಧ್ಯತೆ ಇದೆ- ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಕ್ಲಾರಿಟಿ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ.

JANATAA24 NEWS DESK 

 

KSRTC: ಡೀಸೆಲ್ ದರ ಏರಿಕೆ ಆಗುವ ಸಾಧ್ಯತೆ ಇದೆ- ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಕ್ಲಾರಿಟಿ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ.

KSRTC
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುವ ವದಂತಿ ಕೇಳಿಬರುತ್ತಿರುತ್ತದೆ. ಈ ನಡುವೆ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

 

ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.

 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೀಸೆಲ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ನಾವು ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಈಗ ದರ ಹೆಚ್ಚಳ ಮಾಡುವ ಅಧಿಕಾರ ನಮಗಿಲ್ಲ, ನಾವು ಹೆಚ್ಚಿಸುತ್ತಿಲ್ಲ ಎಂದು ತಿಳಿಸಿದರು.

 

 

ಪ್ರಯಾಣ ದರ ಪರಿಷ್ಕರಣೆಗಾಗಿ ಸಮಿತಿ ರಚಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಅಂತಹ ಯಾವುದೇ ಕ್ರಮವನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಹೇಳಿದರು.

 

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಜನರಿಗೆ ಯಾವುದೇ ಪ್ರಯೋಜನವನ್ನು ತಲುಪಿಸಲಿಲ್ಲ ಎಂದು ಆರೋಪಿಸಿದರು.

 

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 100-130 ಡಾಲರ್ ಇದ್ದ ಕಚ್ಚಾ ತೈಲಕ್ಕೆ ಸಬ್ಸಿಡಿ ನೀಡಲಾಗಿತ್ತು. ಆದರೆ, ಆ ನಂತರದ 10-12 ವರ್ಷಗಳ ಕಾಲ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಲಾಭ ಮಾಡಿಕೊಂಡಿತೇ ಹೊರತು ಜನರಿಗೆ ಇದರ ಲಾಭ ಸಿಗಲಿಲ್ಲ ಎಂದು ಹೇಳಿದರು.

 

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *