Janataa24 NEWS DESK
Lokasabha 2024: ಸಿಎಂ ಆಪರೇಷನ್ ಸಕ್ಸಸ್–ಬಿಜೆಪಿ ಗೆ ಮತ್ತೊಂದು ಶಾಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಆಪರೇಷನ್ ಸಕ್ಸಸ್. ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುತ್ತಾರೆ.
ಬಿಜೆಪಿ ಯುವ ಮೋರ್ಚಾ ದ ರಾಜ್ಯ ಉಪಾಧ್ಯಕ್ಷರಾಗಿದ್ದ ಧೀರಜ್ ಪ್ರಸಾದ್(Dheeraj prasadh) ರವರು ಇಂದು ಬೆಂಗಳೂರು ಕೆಪಿಸಿಸಿ(KPCC) ಕಚೇರಿಯಲ್ಲಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ರವರು ಧೀರಜ್ ಪ್ರಸಾದ್ ಗೆ ಹೂಗುಚ್ಛ ನೀಡಿ, ಹಾರ ಹಾಕಿ ಗೌರವಿಸಿದರು.
ಬಿಜೆಪಿ ಪಕ್ಷದ ನಡೆಗೆ ವಿ.ಶ್ರೀನಿವಾಸ್ ಪ್ರಸಾದ್ ಬೇಸರಗೊಂಡಿದ್ದಾರೆ. ತಮ್ಮ ಅಳಿಯನಿಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದರಾದರೂ ಬಿಜೆಪಿ(BJP)ಯ ನಾಯಕರು ಇವರ ಬೇಡಿಕೆಯನ್ನು ಕಡೆಗಣಿಸಿದ್ದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದ ಕಾಂಗ್ರೆಸ್(Congress)ಗೆ ಇದೀಗ ಸಿಂಹ-ಬಲ ಬಂದಂತಾಗಿದೆ.
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv