Document

Lokasabha Election : ಕಾಂಗ್ರೆಸನ ಎರಡನೇ ಹಂತದ ಲೋಕಸಭಾ ಅಭ್ಯರ್ಥಿ ಪಟ್ಟಿ ರಿಲೀಸ್

Janataa24 NEWS DESK

Lokasabha Election : ಕಾಂಗ್ರೆಸನ ಎರಡನೇ ಹಂತದ ಲೋಕಸಭಾ ಅಭ್ಯರ್ಥಿ ಪಟ್ಟಿ ರಿಲೀಸ್

Lokasabha Election CM Siddaramaiah
Congress Symbol

ಬೆಂಗಳೂರು: ಕೊನೆಗೂ ಎರಡನೇ ಹಂತದ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲಾಗಿದೆ. ರಾಜ್ಯ ಹೈಕಮಾಂಡ್ ಗೆ ಯಾರನ್ನಾ ಎಲ್ಲಿ ನಿಲ್ಲಿಸಿದರೆ ಬಿಜೆಪಿಯವರೊಂದಿಗೆ ನಾವು ಸೆಣಸಾಡಿ ಗೆಲ್ಲಬಹುದು ಎನ್ನುವ ಲೆಕ್ಕಚಾರದಲ್ಲಿರುವ ತಲೆ ಬಿಸಿ ಮಾಡಿಕೊಂಡು ಪಟ್ಟಿ ತಯಾರಿಸಿ ಬಿಡುಗಡೆಗೊಳಿಸಿದೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 17 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದು, ಈ ಪೈಕಿ ಪ್ರಭಾವಿ ಸಚಿವರ ಮಕ್ಕಳಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.

ಲೋಕಸಭಾ ಚುನಾವಣೆ ಟಿಕೆಟ್ ಘೋಷಣೆಯಾಗದ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಬಗ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬಿಜೆಪಿ ಅಭ್ಯರ್ಥಿ ಜೊತೆ ಯಾರಿಗೆ ಹೋರಾಟವ ಶಕ್ತಿ ಪಕ್ಷದ ಬದ್ದತೆ ನಿಷ್ಠೆ ಪ್ರಮಾಣಿಕ ಅವರಿಗೆ ಟಿಕೆಟ್ ಕೊಟ್ಟು ಕಣಕ್ಕೆ ಇಳಿಸುತ್ತಿದೆ.

ಹಿನ್ನೆಲೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ವೆಂಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್‌ಗೆ ಟಿಕೆಟ್ ನೀಡಿದೆ.

ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು ಇದೀಗ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಮಿಕ್ಕಿ ಉಳಿದ ನಾಲ್ಕು ಕ್ಷೇತ್ರಗಳು ಮಾತ್ರ ಬಾಕಿ ಉಳಿದುಕೊಂಡಿವೆ.

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ

ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ

ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌

ಚಿತ್ರದುರ್ಗ ಲೋಕಸಭಾ ಕ್ಷೇತ್ರ- ಬಿ.ಎನ್.ಚಂದ್ರಪ್ಪ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌

ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ

ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ

ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ

ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌

ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌

ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ

ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌

ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ

ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌

ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌

ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಾರಿ ಮುಖಭಂಗವಾಗಿತ್ತು. ಬಿಜೆಪಿ ಮೇಲುಗೈ ಸಾಧಿಸಿತ್ತು.ಅದರಿಂದ ಈ ಬಾರಿ ಕಳೆದ ಬಾರಿಯಂತೆ ಆಗಬಾರದು ಎಂದು ಪಕ್ಷದ ಹಿರಿಯರು ಒಟ್ಟಾಗಿ ಕೂತು ಚರ್ಚೆ ಮಾಡಿ ಸೂಕ್ತರನ್ನಾ ಆಯ್ಕೆ ಮಾಡಿ ಕಣಕ್ಕಿಳಿಸಿ 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಚಾರದಲ್ಲಿ ಕಾಂಗ್ರೆಸ್ ತಂತ್ರಹೂಡಿದೆ.

ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದ ಕಾಂಗ್ರೆಸ್‌ ಈ ಬಾರಿ 20 ಸ್ಥಾನಗಳ ಟಾರ್ಗೆಟ್‌ ಇಟ್ಟುಕೊಂಡು ಅಳೆದೂ ತೂಗಿ ಟಿಕೆಟ್‌ ಹಂಚಿಕೆ ನಡೆಸಿದೆ. ರಾಜ್ಯಮಟ್ಟದಲ್ಲಿ ತಲಾ ಎರಡು ಅಥವಾ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರೀಯ ಚುನಾವಣಾ ಸಮಿತಿಯನ್ನು ಮುಕ್ತ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಘೋಷಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಇತರ ಹಿರಿಯ ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ಟಿಕೆಟ್‌ ಫೈನಲ್‌ ಮಾಡಲಾಗಿದೆ.

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ

https://chat.whatsapp.com/Jf6jZ0gyQAEA5GBRpHnkrv

Subscribe YouTube

https://youtube.com/@janataa24?si=XsFcych2GMH0O6Gv

CISF: ಲೋಕ‌ಸಭಾ ಚುನಾವಣೆ ಹಿನ್ನೆಲೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಪೋರ್ಸ್ ನಿಂದ ಪಥಸಂಚಲನ

Document

Leave a Reply

Your email address will not be published. Required fields are marked *