Janataa24 NEWS DESK
Lokasabha Election : ಬಿಜೆಪಿ ಶುದ್ದೀಕರಣ ಮಾಡುವುದಾಗಿ ಮಾಜಿ ಸಿಎಂ ಡಿವಿ ಸದಾನಂದಗೌಡ ಶಪಥ

ಬೆಂಗಳೂರು: ದಿನಕ್ಕೊಂದು ತಿರವು ಪಡೆಯುತ್ತಿರುವ ಲೋಕಸಭೆ ಚುನಾವಣೆ. ಇದೇ ವೇಳೆ ಪಕ್ಷಾಂತರ ಪರ್ವದ ಗಾಳಿ ಹಾಗೂ ಬಂಡಾಯದ ದಂಗೆ ಪ್ರತಿ ಪಕ್ಷಗಳಿಗೂ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಸಿ ಮುಟ್ಟಿಸುತ್ತಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಶೋಭ ಕರಂದ್ಲಾಜೆ ಅವರಿಗೆ ಕೊಟ್ಟು ಡಿವಿಸ್ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡ ಅವರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡ ಅವರು ಸುದ್ದಿಗೋಷ್ಠಿ ನಡೆಸಿ ಸ್ವಪಕ್ಷದ ವಿರುದ್ದವೇ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ.
ಸ್ಫರ್ಧೆ ಮಾಡಿ ಅಂತ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿ ಗುಡುಗಿದ್ದಾರೆ
ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನನಗೆ ನೋವಾಗಿದೆ. ನನಗೆ ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ಸತ್ಯ ಎಂದು ಸದಾನಂದಗೌಡ ಹೇಳಿದರು. ಪಕ್ಷ ಶುದ್ಧೀಕರಣ ನನ್ನ ಮುಖ್ಯ ಉದ್ದೇಶ. ಮುಂದಿನ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡುತ್ತಾರೆ. ಮುಂದಿನ ನಡೆ ಏನು ಎಂದು ಹಲವರು ಕೇಳಿದ್ದಾರೆ. ನನ್ನ ಮುಂದಿನ ನಡೆ ಪಕ್ಷ ಶುದ್ಧೀಕರಣ. ಬಿಜೆಪಿ ತೊರೆಯುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ
ಪ್ರಸುತ್ತ ರಾಜ್ಯದಲ್ಲಿ ಇರುವ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಟಕ್ಕರ್ ಕೊಡಲು ಎನ್ ಡಿ ಎ ಜೊತೆಗಿನ ಜೆಡಿಎಸ್ ಸೇರ್ಪಡೆ ಆಗಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಈ ಸಂದರ್ಭದಲ್ಲಿ ಪಕ್ಷಕ್ಕೆ ಜೀವ ತ್ಯಾಗ ಮಾಡಿದವರನ್ನು ಕಡೆಗಣಿಸಬಾರದು ಎಂದು ಹೇಳಿರುವ ಸದಾನಂದಗೌಡ, ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದೆ. ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ. ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
Chikkamagaluru: ಕಂಕಣ ಭಾಗ್ಯ ಕಲ್ಪಿಸುವಂತೆ ದೇವರ ಹುಂಡಿಗೆ ಪತ್ರ ಹಾಕಿದ ಅವಿವಾಹಿತ ಯುವಕರು