Document

LOKAYUKTA: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು

Janataa24 NEWS DESK 

LOKAYUKTA: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು.

Lokayukta

ರಾಯಚೂರು/ಬಾಗಲಕೋಟೆ: ಇಂದು ಬೆಳ್ಳಂಬೆಳಗ್ಗೆಯೇ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ಸಿಬ್ಬಂದಿ ದಾಳಿ ಮಾಡಿ ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

 

ಅಕ್ರಮ ಆಸ್ತಿ ಗಳಿಕೆ ಮಾಡಿರುವ ಕುರಿತು ಬಾಗಲಕೋಟೆ ಹಾಗೂ ರಾಯಚೂರಿನ ಕೆಲ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತರಿಗೆ ದೂರು ನೀಡಲಾಗಿತ್ತು. ಈ ಸಂಬಂಧ ಇಂದು ಬೆಳಗ್ಗೆಯೇ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಅನೇಕ ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಗಳಿಕೆ ಹೇಗೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

 

ರಾಯಚೂರು ನಗರದ ದೇವರ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಇವರು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ದೂರು ಬಂದಿದ್ದರಿಂದ ಈ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್​ನಲ್ಲಿರುವ ಪಿಡಿಓ ಬಿ.ಎಸ್ ಹಿರೇಮಠ ಮನೆ ಮೇಲೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಬಾದಾಮಿ ತಾಲೂಕಿನ‌ ಹೂಲಗೇರಿ ಗ್ರಾಮದ ಪಿಡಿಓ ಆಗಿರುವ ಹಿರೇಮಠ ಆದಾಯಕ್ಕಿಂತ ಹೆಚ್ಚು ಹಣ ಗಳಿಸಿದ್ದಾರೆ ಎಂದು ದೂರು ಬಂದಿದೆ. ಸದ್ಯ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

 

ಬಿ.ಎಸ್ ಹಿರೇಮಠ ಬಾದಾಮಿ ವಿದ್ಯಾಗಿರಿಯ ನಿವಾಸ ಅಲ್ಲದೇ ನರಗುಂದದ ತಾಲೂಕಿನಲ್ಲೂ ಐಷಾರಾಮಿ ನಿವಾಸ ಹೊಂದಿದ್ದಾರೆ. ಇದರ ಮೇಲೂ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಏಕಕಾಲಕ್ಕೆ 3 ಕಡೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ಅವರ ನೇತೃತ್ವ ತಂಡ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದೆ.

 

 

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

https://youtube.com/@janataa24?si=XsFcych2GMH0O6Gv

https://www.janataa24.com/iasipskas-who-stood-as-the-godfather-of-the/

https://www.janataa24.com/miscreants-uprooted-40-coconut-trees-turuvekere/

Mandya: ಪತ್ನಿ ನೇಣಿಗೆ ಶರಣಾದದನ್ನು ಕಂಡು ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ.

Document

Leave a Reply

Your email address will not be published. Required fields are marked *