Document

Madikeri: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ-ಹೆದ್ದಾರಿ ತಡೆದು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಗ್ರಾಮಸ್ಥರು.

JANATAA24 NEWS DESK 

 

Madikeri: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ-ಹೆದ್ದಾರಿ ತಡೆದು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಗ್ರಾಮಸ್ಥರು.

Madikeri

ಮಡಿಕೇರಿ: ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದ್ದು, ಕಾಡಾನೆ ದಾಳಿಯಿಂದ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಬೆಟ್ಟತ್ತೂರು ಗ್ರಾಮದ ಪೂಜಾ ಮೃತ ದುರ್ದೈವಿ.

 

ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

 

ಈ ಘಟನೆಯಿಂದ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಮದೆನಾಡು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಮೈಸೂರು – ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಜಮಾಯಿಸಿದ ಗ್ರಾಮಸ್ಥರು, ರೈತಪರ ಸಂಘಟನೆಗಳು ಹೆದ್ದಾರಿಯನ್ನು ತಡೆದು ಅರಣ್ಯ ಅಧಿಕಾರಿಗಳು ಹಾಗೂ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

 

ಪರಿಣಾಮ ಸುಮಾರು ಎರಡು ಗಂಟೆಗೂ ಹೆಚ್ಚುಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.

 

ಪ್ರತಿಭಟನಾ ಸ್ಥಳದಲ್ಲಿದ್ದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಬಿಜೆಪಿ ಮುಖಂಡರು,ಅರಣ್ಯಾಕಾರಿಗಳು ಸ್ಥಳಕ್ಕಾಗಮಿಸದೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರಿಂದ ಪ್ರತಿಭಟನಾಕಾರರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.

 

 

ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾ ಅರಣ್ಯ ಸಂರಕ್ಷಣಾಕಾರಿ ಸೋನಲ್‌ ವೃಶ್ನಿ ಬಿಗಿ ಪೊಲೀಸ್‌ ಬಂದೋಬಸ್ಥ್‌ನೊಂದಿಗೆ ಪ್ರತಿಭಟನಕಾರರ ಅಹವಾಲು ಆಲಿಸಿದರು. ಈ ಸಂದರ್ಭ ಪ್ರತಿಭಟನಾಕಾರರು ಆನೆ ಮಾನವ ಸಂಘರ್ಷಕ್ಕೆ ಕಾರಣವಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು ಹಾಗೂ ಜನವಸತಿ ಪ್ರದೇಶದಲ್ಲಿ ಕಾಡಾನೆಗಳು ಬರದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈಬಿಡಲಾಯಿತು.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *