JANATAA24 NEWS DESK
Mangaluru: ಅತ್ಯಾಚಾರ ಆರೋಪದಡಿ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಪ್ರಕರಣ ದಾಖಲು.!

ಮಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ಗೆ ಬಿಗ್ ಶಾಕ್ ಸಿಕ್ಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
2020ರಲ್ಲಿ ಸಂದೇಶ್ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ.2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಪಿಐ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಮತ್ತು ಪ್ರೇರಿತ ಎಂದು ಸಾಬೀತಾಗಿದೆ ಎಂದು ನಿನ್ನೆಯಷ್ಟೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಈಗ ಸಂದೇಶ್ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ.
ಸಂತ್ರಸ್ತೆ ಮಹಿಳೆ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್ಪೆಕ್ಟರ್ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವ ಹೊಣೆಯನ್ನು ಎಸಿಪಿ ಶ್ರೀಕಾಂತ್‌ಗೆ ನೀಡಲಾಗಿತ್ತು. ಪ್ರಕರಣ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಮಾಡಿ ಸಂದೇಶ್ರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಟೋ ಕೇಸ್ ದಾಖಲಿಸಿಕೊಂಡು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇನ್ಸ್ಪೆಕ್ಟರ್ ಸಂದೇಶ ಅವರನ್ನು ಅಮಾನತು ಕೂಡ ಮಾಡಲಾಗಿತ್ತು.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.