Janataa24 NEWS DESK
Neha Incident: ಹೇಯ ಕೃತ್ಯದಿಂದ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದ- ಸತೀಶ್ ಜಾರಕಿಹೊಳಿ.

ಬೆಳಗಾವಿ: ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿಯ ಕೊಲೆಗೆ ಸಂಬಂಧಿಸಿದಂತೆ.ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಕೊಲೆ ಖಂಡನೀಯ ಎಂದು ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ(Satish Jarakiholi)ಹೇಳಿದ್ದಾರೆ.ಈ ಕುರಿತು ಹೇಳಿಕೆ ನೀಡಿದ ಅವರು ಈ ಹೇಯ ಕೃತ್ಯದಿಂದ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಅಪರಾಧಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಲು ನಮ್ಮ ಸರ್ಕಾರ ಬದ್ಧವಿದೆ. ಈಗಾಗಲೇ ಆರೋಪಿಯ ಬಂಧನವಾಗಿದೆ. ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ(CM Siddaramaiah)ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ(Dr.G.Parameshwara) ಅವರು ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೂ ರಾಜಕೀಯಕ್ಕೂ ಸಂಬಂಧ ಸೇರಿಸುವುದು ಸರಿಯಲ್ಲ. ಬಿಜೆಪಿಯವರು ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
https://www.janataa24.com/fire-accident-coirr-factory-worth-more-than-one/ಕೆಳಗಿನ
ಈ ಕೆಳಗಿನ ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv