Janataa24 NEWS DESK
NIA: ರಾಮೇಶ್ವರಂ ಕೆಫೆ ಪ್ರಕರಣ‐ಬಿಜೆಪಿ ಕಾರ್ಯಕರ್ತನ ಬಂಧನ.

ಶಿವಮೊಗ್ಗ: ಇತ್ತೀಚೆಗೆ ಹೆಚ್ಚು ಸದ್ದು ಮಾಡಿ ಗಂಭೀರವಾಗಿ ಪರಿಗಣಿಸಿದ ಪ್ರಕರಣವಾದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಅರೋಪಿ ಶಿವಮೊಗ್ಗ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast Case) ಪ್ರಕರಣಕ್ಕೆ ಸಂಭಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಮುಂದಿನ ತನಿಖೆ ಮುಂದುವರೆಸಲಿದ್ದಾರೆ.
ಭಾರತೀಯ ಜನತ ಪಾರ್ಟಿ(BJP)ಯಲ್ಲಿ ಗುರುತಿಸಿಕೊಂಡಿದ್ದ ಸಾಯಿಪ್ರಸಾದ್‌ನನ್ನು ಎನ್‌ಐಎ ಸಿಬ್ಬಂದಿ ತನಿಖೆಗೆ ಕರೆದೊಯ್ದಿದ್ದಾರೆ.
ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ
https://chat.whatsapp.com/Jf6jZ0gyQAEA5GBRpHnkrv
Subscribe YouTube
https://youtube.com/@janataa24?si=XsFcych2GMH0O6Gv
Turuvekere : ತುರುವೇಕೆರೆಯಲ್ಲಿ ಡಾ.ಬಾಬು ಜಗಜೀವನ ರಾಂ ರವರ 117ನೇ ಜನ್ಮ ದಿನಾಚರಣೆ .