Document

Pavagada: ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳಕ್ಕೆ ಮನನೊಂದ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಕಛೇರಿಯಲ್ಲಿಯೇ ನೇಣಿಗೆ ಶರಣು.

JANATAA24 NEWS DESK 

 

 

Pavagada: ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳಕ್ಕೆ ಮನನೊಂದ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಕಛೇರಿಯಲ್ಲಿಯೇ ನೇಣಿಗೆ ಶರಣು.

 

Pavagada

ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಕಛೇರಿಯಲ್ಲಿಯೇ ನೇಣು ಬೀಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.

 

ಮಲ್ಲಿಕಾರ್ಜುನ ಇದೇ ತಿಂಗಳು ನಿವೃತ್ತರಾಗುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.

 

ಜಿಲ್ಲಾ ಜಂಟಿ ನಿರ್ದೇಶಕರಾದ ಕೃಷ್ಣಪ್ಪ ನವರರ ಕಿರುಕುಳ ಈ ಸಾವಿಗೆ ಕಾರಣ ಎಂಬುದಾಗಿ ಕುಟುಂಬ ಸದಸ್ಯರು ನೇರವಾಗಿ ಆರೋಪ ಮಾಡಿದ್ದಾರೆ ಕುಟುಂಬದ ಸದಸ್ಯರು ಹೇಳುವ ಪ್ರಕಾರ ಈ ತಿಂಗಳು ಕೊನೆಯದಲ್ಲಿ ನಿವೃತ್ತಗೊಳ್ಳುವ ಹಿನ್ನೆಲೆಯಲ್ಲಿ ಪದೇ ಪದೇ ನಿನ್ನ ಕಛೇರಿಗೆ ಲೇಖನಗಳು ಇವೇ ಬರುತ್ತೇನೆ ನಿಮ್ಮ ಕಚೇರಿಗೆ ಎಂಬುದಾಗಿ ಪದೇ ಪದೇ ಹೇಳಲಾಗುತ್ತಿತ್ತು ಎಂಬುದಾಗಿ ತಿಳಿದುಬಂದಿದೆ.

 

ಸಿಬ್ಬಂದಿಗಳಿಗೆ ನನಗೆ ಕೆಲಸ ಇದೆ ತಾವು ಮನೆಗೆ ಹೋಗಿ ಎಂಬುದಾಗಿ ಸಂಜೆಯಿಂದಲೂ ಕಚೇರಿಯಲ್ಲೇ ಇದ್ದ ಮಲ್ಲಿಕಾರ್ಜುನ್.

 

ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ ಮೂರು ವರ್ಷಗಳಿಂದ ಪಾವಗಡ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಈ ತಿಂಗಳ ಕೊನೆಯಲ್ಲಿ ನಿವೃತ್ತಿಗೊಳ್ಳುತ್ತಿದ್ದ ಮಲ್ಲಿಕಾರ್ಜುನ್ ರವರ ಈ ನಿರ್ಧಾರವು ಕುಟುಂಬಸ್ಥರಿಗೆ ತೀವ್ರ ದುಃಖಕ್ಕೆ ದೂಡಿದಂತಾಗಿದೆ.

ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ನಮ್ಮ ತಾಯಿ ಹೆಂಡತಿ ಮಕ್ಕಳು ನಮ್ಮ ಇಡೀ ಸಂಸಾರ ನನ್ನನ್ನು ಚೆನ್ನಾಗಿ ನೋಡಿಕೊಂಡಿದೆ. ನನಗೆ ಒಳ್ಳೆಯ ಬೆಲೆ ಕೊಟ್ಟಿದ್ದಾರೆ. ನಾನು ಅವರಿಗೆ ಇನ್ನು ಸಹಾಯ ಮಾಡಬೇಕಿತ್ತು ಆದ್ರೆ ಅದು ಆಗುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ನನಗೆ ತೊಂದರೆ ಕೊಟ್ಟಿರುವುದರಿಂದ ನಾನು ಈ ನಿರ್ಧಾರಕ್ಕೆ ಬಂದಿರುವೆ. ಅವರಿಗೆ ದೇವರೇ ಶಿಕ್ಷೆ ನೀಡುತ್ತಾನೆ. ಅವನು ತರ್ಲೆ ಇರುವುದರಿಂದ ನಮ್ಮ ಕುಟುಂಬದವರು ಏನು ಸೇಡು ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲಾ. ಅವನಿಗೆ ದೇವರು, ಕಾನೂನು ಶಿಕ್ಷೆ ಕೊಟ್ಟೆ ಕೊಡುತ್ತದೆ ಎಂದು ವೀಡಿಯೋದಲ್ಲಿ ಉಲ್ಲೇಖಿಸಿದ್ದಾರೆ.
ಕುಟುಂಬ ಸದಸ್ಯರ ರೋಧನೆ ಮುಗಿಲು ಮುಟ್ಟಿತ್ತು.

 

ಸ್ಥಳಕ್ಕೆ ಸಿಪಿಐ ಕೆ ಸುರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಬಂದು ಕುಟುಂಬ ಸದಸ್ಯರ ಮಾಹಿತಿ ಪಡೆಯುತ್ತಿದ್ದಾರೆ.

 

ವರದಿ:  ಇಮ್ರಾನ್ ಉಲ್ಲಾ ಪಾವಗಡ.

ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv

 

https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en

 

 

https://youtube.com/@janataa24?si=XsFcych2GMH0O6Gv

 

 

https://www.janataa24.com/turuvekere-protesting-against-stone-mining/

 

IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.

 

 

Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.

 

 

Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.

 

Document

Leave a Reply

Your email address will not be published. Required fields are marked *