JANATAA24 NEWS DESK
Pavagada: ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್–ಡೈರಿ ಬಿಡುಗಡೆ ಮಾಜಿ ಸಚಿವ ವೆಂಕಟರಮಣಪ್ಪರಿಂದ ಉದ್ಘಾಟನೆ.

ಪಾವಗಡ: ಪಾವಗಡ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಕಾರ್ಯಕ್ರಮವನ್ನು ಮಾಜಿ ಸಚಿವ ವೆಂಕಟರಮಣಪ್ಪ ಅವರು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾವಗಡಕ್ಕೆ ಶಾಶ್ವತ ನೀರು ದೊರಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಖ್ಯ ಕಾರಣ ಎಂದು ಹೇಳಿದರು. ಅಧಿಕಾರದಲ್ಲಿರುವ ಸಮಯದಲ್ಲಿ ಜನರಿಗೆ ಶಾಶ್ವತವಾಗಿ ಉಪಯುಕ್ತವಾಗುವ ಕೆಲಸಗಳನ್ನು ಮಾಡಿದಾಗ ಮಾತ್ರ ನಿಜವಾದ ಸೇವಾ ತೃಪ್ತಿ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಜಾತಿ–ಭೇದವಿಲ್ಲದೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಗುಂಡೂರಾವ್ ಅವರ ಅವಧಿಯಲ್ಲೂ ವಿದ್ಯುತ್ ಉಚಿತವಾಗಿ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.
ಸರ್ಕಾರಿ ನೌಕರರಿಗೆ ಜಾಗದ ವ್ಯವಸ್ಥೆ ಕುರಿತು ಮಾತನಾಡಿದ ಅವರು, ಜಾಗ ನೀಡುವ ಅಧಿಕಾರ ತಮಗಿದ್ದು, ಸೂಕ್ತ ಸ್ಥಳವನ್ನು ನಿಗದಿಪಡಿಸಿದ ನಂತರ ಅಗತ್ಯ ಅನುದಾನ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಅಧಿಕಾರ ಯಾರಿಗೂ ಶಾಶ್ವತವಲ್ಲ. ಅಧಿಕಾರದಲ್ಲಿರುವ ಸಮಯದಲ್ಲಿ ಪ್ರಾಮಾಣಿಕವಾಗಿ ಹಾಗೂ ಆತ್ಮಶುದ್ಧಿಯಿಂದ ಜನಸೇವೆ ಮಾಡಿದರೆ ಅದಕ್ಕಿಂತ ದೊಡ್ಡ ಕಾರ್ಯ ಮತ್ತೊಂದಿಲ್ಲ ಎಂದು ಹೇಳಿದರು. ಸರ್ಕಾರಿ ನೌಕರರು ಜನರ ಕಷ್ಟ–ನೋವುಗಳಿಗೆ ಸ್ಪಂದಿಸಿ, ಅರ್ಜಿಗಳು ಹಾಗೂ ಕೆಲಸಗಳನ್ನು ವಿಳಂಬವಿಲ್ಲದೆ ನಿರ್ವಹಿಸಿದರೆ ದೇವರ ಬಳಿ ಬೇಡುವ ಅಗತ್ಯವೇ ಇರುವುದಿಲ್ಲ ಎಂದು ತಿಳಿಸಿದರು.
ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಾಗಿ ಕೆಲಸ ಮಾಡಿದರೆ ಪಾವಗಡ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಕಳಚಿ ಹೋಗುತ್ತದೆ. ಆದ್ದರಿಂದ ಯಾವುದೇ ಕೆಲಸವನ್ನೂ ವಿಳಂಬ ಮಾಡದೆ ನಿಷ್ಕಲ್ಮಶವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ರವಿ ಅವರು, ಸಂಘಕ್ಕೆ ನಿವೇಶನ ಹಾಗೂ ಕಟ್ಟಡ ಕಲ್ಪಿಸಿಕೊಡುವಂತೆ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರ ಪರವಾಗಿ ಮಾಜಿ ಸಚಿವರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ದಂಡಾಧಿಕಾರಿ ವೈ. ರವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಧುಸೂದನ್, ಖಜಾಂಚಿ ಶೇಖರ್ ಬಾಬು, ರಾಜ್ಯಪರಿಷತ್ ಸದಸ್ಯ ಗಂಗಾಧರ, ಕಾರ್ಯದರ್ಶಿ ಮರುತೇಶ ಎಂ.ಎಲ್., ಜಿಲ್ಲಾ ಉಪಾಧ್ಯಕ್ಷ ರಾಕೇಶ್, ಹಿರಿಯ ಉಪಾಧ್ಯಕ್ಷರಾದ ರಾಜಣ್ಣ ಬಿ.ಆರ್. ಹಾಗೂ ನಾಗರಾಜ, ಉಪಾಧ್ಯಕ್ಷರಾದ ಗಂಗಾಧರ ಮತ್ತು ರಾಮಾಂಜಿನೇಯ ಕೆ., ಎಚ್.ಪಿ. ಕಿರಣ್ ಕುಮಾರ್, ಕೆ.ವಿ. ನಾರಾಯಣ್, ರಾಜಗೋಪಾಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ: ಇಮ್ರಾನ್ ಉಲ್ಲಾ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.