JANATAA24 NEWS DESK
Pavagada: ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ 195ನೇ ಜಯಂತಿ ವಿಶೇಷ ಆಚರಣೆ

Pavagada: ಸಾವಿತ್ರಿಬಾಯಿ ಫುಲೆ ಸಂಘದಿಂದ ವೃದ್ಧಾಶ್ರಮದಲ್ಲಿ ಸೇವಾ ಕಾರ್ಯಕ್ರಮ
ಪಾವಗಡ: ಅಕ್ಷರದವ್ವ ಎಂದೇ ಖ್ಯಾತರಾದ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತಿಯನ್ನು ಪಾವಗಡ ತಾಲ್ಲೂಕು ಸಾವಿತ್ರಿಬಾಯಿ ಫುಲೆ ಸಂಘದ ವತಿಯಿಂದ ಈ ವರ್ಷ ವಿಶೇಷವಾಗಿ ಪಾವಗಡ ತಾಲ್ಲೂಕಿನ ಹತ್ತಿರದ ಆಮಿದಾಲ ಗೊಂದಿಯಲ್ಲಿರುವ ಶ್ರೀ ವೃದ್ಧಾಶ್ರಮದಲ್ಲಿ ಅರ್ಥಪೂರ್ಣವಾಗಿ ಭಾನುವಾರ ದಂದು ಆಚರಿಸಲಾಯಿತು.
ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವೃದ್ಧಾಶ್ರಮದಲ್ಲಿರುವ ಎಲ್ಲಾ ವೃದ್ಧರಿಗೆ ಒಟ್ಟಾಗಿ ಸಿಹಿ ಊಟದ ಭೋಜನವನ್ನು ಏರ್ಪಡಿಸಲಾಗಿದ್ದು, ಜೊತೆಗೆ ಸೀರೆ, ಪಂಚೆ, ಟವಲ್, ಹಣ್ಣುಹಂಪಲು, ಬ್ರೆಡ್ ಹಾಗೂ ಬಿಸ್ಕೆಟ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪಾವಗಡ ತಾಲ್ಲೂಕು ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಖಜಾಂಚಿ, ಉಪಾಧ್ಯಕ್ಷರು, ರಾಜ್ಯ ಆಪ್ತಕಾರ್ಯದರ್ಶಿ ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.
ಇದಲ್ಲದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗಳಾದ ಮಾರುತೇಶ್ವರ ಅವರು ಹಾಗೂ ಉಪಾಧ್ಯಕ್ಷರಾದ ಗಂಗಾಧರ್ ಅವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ವಿಶೇಷವಾಗಿ ಎಂಪಿ ಶಾಂತಕುಮಾರಿ ಅವರಿಂದ ವಸ್ತ್ರ ವಿತರಣೆ ನೆರವೇರಿಸಲಾಯಿತು. ಸಂಘದ ಸದಸ್ಯರು ದೇಣಿಗೆ ರೂಪದಲ್ಲಿ ಸಹಾಯಧನವನ್ನು ನೀಡುವ ಮೂಲಕ ಸೇವಾ ಮನೋಭಾವವನ್ನು ಪ್ರದರ್ಶಿಸಿದರು.
ವೃದ್ಧಾಶ್ರಮದ ಮುಖ್ಯಸ್ಥರಾದ ಶ್ರೀ ತಿಮ್ಮಾರೆಡ್ಡಿ ಅವರು ಸಂಘದ ಈ ಸೇವಾ ಕಾರ್ಯವನ್ನು ಶ್ಲಾಘಿಸಿ, ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲ ಗಣ್ಯರು ಹಾಗೂ ಸಹಕಾರ ನೀಡಿದವರಿಗೆ ಸಂಘದ ಪರವಾಗಿ ಧನ್ಯವಾದಗಳು ಅರ್ಪಿಸಿದರು.
ವರದಿ: ಇಮ್ರಾನ್ ಉಲ್ಲಾ.ಪಾವಗಡ
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.